ಭಟ್ಕಳ : ಕಳೆದ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಕೆರೆಯೊಂದರಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ನಾಪತ್ತೆಯಾದ ವ್ಯಕ್ತಿ ಮಾನಸಿಕ ಅಸ್ವಸ್ಥನೆಂಬ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆತನ ಮೃತದೇಹ ಇಲ್ಲಿನ ಬೆಂಗ್ರೆಯ ಉಳ್ಮಣ್ ಕರೆಯಲ್ಲಿ ರವಿವಾರ ಸಂಜೆ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತಪಟ್ಟವನನ್ನು ಚಿರಂಜೀವಿ ಅನಂತ ದೇವಾಡಿಗ (24) ಉಳ್ಮಣ್ ಬೆಂಗ್ರೆ ಎಂದು ಗುರುತಿಸಲಾಗಿದೆ. ಈತ ಮಾನಸಿಕ ಅಸ್ವಸ್ಥನಾಗಿದ್ದು, ಶನಿವಾರ ಸಂಜೆಯಿಂದ ಮನೆಯಿಂದ ಹೊರಗೆ ಹೋಗಿದ್ದವನು ನಾಪತ್ತೆಯಾಗಿದ್ದ ಎನ್ನಲಾಗಿದೆ.
ಇದೀಗ ಈತನ ಶವ ಬೆಂಗ್ರೆಯ ಉಳ್ಮಣನ ಕೆರೆಯೊಂದರಲ್ಲಿ ಪತ್ತೆಯಾಗಿದ್ದು ಈತ ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತಾಗಿ ಮಾಹಿತಿ ಸಂಗ್ರಹ ಹಾಗೂ ತನಿಖೆಯಲ್ಲಿ ತೊಡಗಿದ್ದು ತನಿಖೆಯ ನಂತರವಷ್ಟೇ ಸಂಪೂರ್ಣ ಮಾಹಿತಿ ಹೊರಬರಬೇಕಾಗಿದೆ.