ಹೊನ್ನಾವರ : ಜನಸಂಘದ ಕಾಲದಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷದ ಅತ್ಯಂತ ಕಷ್ಟ ಕಾಲದಲ್ಲಿ 18 ವರ್ಷಗಳ ವರೆಗೆ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿದ್ದರು. ಒಮ್ಮೆ ರಾಜ್ಯ ಕಾರ್ಯದರ್ಶಿಯಾಗಿ 1983ಹಾಗೂ ಎರಡನೇ ಬಾರಿ 1994ರಲ್ಲಿ ಎರಡು ಬಾರು ಕುಮಟಾ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ, ಶಿಕ್ಷಣ ಕ್ಷೇತ್ರದಲ್ಲಿ ಪ್ರತಿಷ್ಟಿತ ಸಂಸ್ಥೆ ಯಾದಂತ ಶ್ರೀ ಧರ್ಮಸ್ಥಳ ಮಂಜುನಾಥೆಶ್ವರದ 40 ವರ್ಷಗಳ ವರೆಗೆ ಸೇವೆ ಸಲ್ಲಿಸಿರುವ ಡಾ. ಎಂ.ಪಿ ಕರ್ಕಿ(87) ಇಂದು ನಮ್ಮನ್ನೆಲ್ಲ ಅಗಲಿದ್ದಾರೆ, ಶ್ರೀಯುತರು ಪತ್ನಿ, ಪುತ್ರಿ, ಪುತ್ರ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಇಹಲೋಕ ತ್ಯಜಿಸಿರುವ ಡಾ. ಎಂ.ಪಿ ಕರ್ಕಿ ಅವರ ಅಗಲುವಿಕೆಯ ಕುರಿತಾಗಿ ಮುಖ್ಯಮಂತ್ರಿಯಾದಿಯಾಗಿ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳಿಂದ ಸಂತಾಪ ಸೂಚನೆ.

ಭಾರತೀಯ ಜನಸಂಘದ ಕಾರ್ಯಕರ್ತರು, ಭಾರತೀಯ ಜನತಾ ಪಾರ್ಟಿಯ ಅತ್ಯಂತ ಕಷ್ಟ ಕಾಲದಲ್ಲಿ 18 ವರ್ಷಗಳ ಕಾಲ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿದ್ದ ಹಾಗೂ ಎರಡು ಬಾರಿ ಕುಮಟಾ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ. ಎಂ. ಪಿ. ಕರ್ಕಿ ಅವರ ನಿಧನದ ಸುದ್ದಿಯಿಂದ ತುಂಬಾ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಹಾಗೂ ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ನೀಡಲಿಯೆಂದು ಪ್ರಾರ್ಥಿಸುತ್ತೇನೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ.

ಉತ್ತರ ಕನ್ನಡ ಜಿಲ್ಲೆಯ ಬಿಜೆಪಿಯ ಹಿರಿಯ ಧುರೀಣರು, ಕುಮಟಾ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕರಾದ ಡಾ. ಎಂ.ಪಿ.ಕರ್ಕಿ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಜನಸಂಘದ ಕಾಲದಿಂದಲೂ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಜೆಪಿಯನ್ನು ಕಟ್ಟಿ ಬೆಳೆಸಿದವರಲ್ಲಿ ಡಾ. ಕರ್ಕಿಯವರ ಕೊಡುಗೆ ಅಪಾರವಾದುದು. ಡಾ. ಕರ್ಕಿಯವರು ಸಮಾಜ ಸೇವೆಯ ಜೊತೆಗೆ ವೈಧ್ಯಕೀಯ, ಶೈಕ್ಷಣಿಕ ಕ್ಷೇತ್ರದಲ್ಲಿಯೂ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದ್ದರು. ವಯಕ್ತಿಕವಾಗಿ ಅವರು ನನಗೆ ನೀಡುತ್ತಿದ್ದ ಮಾರ್ಗದರ್ಶನವನ್ನು ಸ್ಮರಿಸಿಕೊಳ್ಳುತ್ತೇನೆ. ಶ್ರೀಯುತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ದಯಪಾಲಿಸಲಿ. ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

RELATED ARTICLES  ಉಜ್ವಲ ಯೋಜನೆಯಡಿ ಕೊಡ್ಕಣಿಯಲ್ಲಿ ದಿನಕರ ಶೆಟ್ಟಿಯವರಿಂದ ಗ್ಯಾಸ್ ವಿತರಣೆ : ಕೋಡ್ಕಣಿ ಜನತೆಯ ಜೊತೆ ಸದಾ ಇರುವುದಾಗಿ ಭರವಸೆ ನೀಡಿದ ಶಾಸಕರು.

ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸಂತಾಪ.

ಉತ್ತರಕನ್ನಡ ಜಿಲ್ಲೆಯ ಹಿರಿಯ ಮುತ್ಸದ್ದಿ ನಾಯಕರು, ಬಡವರ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದ ಕುಮಟಾ – ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ಶ್ರೀ ಎಮ್.ಪಿ.ಕರ್ಕಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.

ಡಾ. ಎಮ್.ಪಿ ಕರ್ಕಿ ಅವರು ಜನಸಂಘದ ಕಾಲ ಘಟ್ಟದಿಂದಲೂ ಸಹ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರವಾದ ಪಾತ್ರವನ್ನು ವಹಿಸಿದರು. ಲೋಕಸಭೆ ಚುನಾವಣೆಗೆ ಯಾರು ಸಹ ಸ್ಪರ್ಧಿಸುವವರೆ ಇಲ್ಲದ ಸಂದರ್ಭದಲ್ಲಿ ಸೋಲು ಗೊತ್ತಿದ್ದರು ಸಹ ಪಕ್ಷ ಸಂಘಟನೆಗಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು, ಹಲವಾರು ವರ್ಷಗಳ ಕಾಲ ಪಕ್ಷದ ಜಿಲ್ಲಾಧ್ಯಕ್ಷರಾಗಿ ಅವರು ಸಲ್ಲಿಸಿರುವ ಸೇವೆ ಅನನ್ಯ.

ನನ್ನನ್ನು ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷನಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಡಾ.ಕರ್ಕಿ ರವರು ನೀಡಿರುವ ಸಹಕಾರ, ಸಲಹೆ ಮಾರ್ಗದರ್ಶನ ಹಾಗೂ ಅವರೊಂದಿಗೆ ಕಾರ್ಯನಿರ್ವಹಿಸಿದ್ದ ನೆನಪುಗಳು ಇಂದಿಗೂ ಸಹ ನನ್ನ ನೆನಪಿನಂಗಳದಲ್ಲಿ ಹಚ್ಚ ಹಸಿರಾಗಿದೆ, ಶ್ರೀಯುತರು ರಾಜಕೀಯದ ಜೊತೆ ಜೊತೆಯಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಸಹ ಅಪಾರ ಕೊಡುಗೆಯನ್ನು ನೀಡಿದ್ದಾರೆ.

RELATED ARTICLES  ರಾಘವೇಶ್ವರ ಶ್ರೀ ಸೀಮೋಲ್ಲಂಘನ : ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ನಾಳೆ

ಡಾ.ಎಮ್.ಪಿ.ಕರ್ಕಿ ಅವರ ನಿಧನದಿಂದಾಗಿ ಜಿಲ್ಲೆಗೆ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.ಭಗವಂತ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೆನೆ.

ಶಾಸಕ ದಿನಕರ ಶೆಟ್ಟಿ ಸಂತಾಪ.

ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು , ಹಿರಿಯರಾದ ಡಾ.ಎಂ ಪಿ ಕರ್ಕಿ ಯವರು ಇಂದು ದೈವಾಧೀನರಾದ ಸುದ್ದಿ ತಿಳಿದು ಬೇಸರವಾಯಿತು. ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಿ, ಕುಟುಂಬಸ್ಥರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುವೆ.

ಶಾಸಕಿ ರೂಪಾಲಿ ನಾಯ್ಕ ಸಂತಾಪ

ಮಾಜಿ ಶಾಸಕರಾದ ಡಾ.ಎಂ.ಪಿ.ಕರ್ಕಿ ಸೋಮವಾರ ದೈವಾಧೀನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ.
ಡಾ.ಕರ್ಕಿ ಅವರು ಶಾಸಕರಾಗಿ, ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ, ವೈದ್ಯರಾಗಿ, ಜನಸೇವೆಯಲ್ಲಿ ತೊಡಗಿಸಿಕೊಂಡು ನಮ್ಮೆಲ್ಲರಿಗೆ ಆದರ್ಶಪ್ರಾಯರಾಗಿದ್ದರು. ಹೊನ್ನಾವರದ ಎಸ್ ಡಿ ಎಂ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಯುವಜನತೆಗೆ ಶಿಕ್ಷಣ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಪಕ್ಷಕ್ಕೆ, ನಮಗೆ ಮಾರ್ಗದರ್ಶಕರಾಗಿದ್ದ ಅವರು ನಮ್ಮನ್ನು ಅಗಲಿರುವುದು ತೀವ್ರ ನೋವಿನ ಸಂಗತಿಯಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಶಾಸಕ‌ ಸುನೀಲ್ ನಾಯ್ಕ ಸಂತಾಪ.

ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು, ಕುಮಟಾ ಹೊನ್ನಾವರ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ಎಮ್ ಪಿ ಕರ್ಕಿಯವರು ಇಂದು ನಮ್ಮನ್ನೆಲ್ಲಾ ಅಗಲಿದ್ದು, ದೇವರು ಅವರ ಆತ್ಮಕ್ಕೆ ಚಿರ ಶಾಂತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.