ಹೊನ್ನಾವರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ , ಉತ್ತರಕನ್ನಡ ಜಿಲ್ಲೆಯವತಿಯಿಂದ, ಇತ್ತೀಚೆಗೆ ನಮ್ಮನ್ನು ಅಗಲಿದ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಪಕ್ಷದ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಜನಸಂಘದ ಸಮಯದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯರಾದ ದಿವಂಗತ ಡಾ. ಎಂ ಪಿ ಕರ್ಕಿಯವರ ಶ್ರದ್ದಾಂಜಲಿ ಸಭೆ ನಡೆಯಿತು.
ಶೃದ್ಧಾಂಜಲಿ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ್ ನಾಯಕ, ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ದಿನಕರ್ ಶೆಟ್ಟಿ, ವಿಭಾಗ ಸಹ ಪ್ರಭಾರಿಗಳಾದ ಶ್ರೀ ಎನ್ ಎಸ್ ಹೆಗಡೆ ಕರ್ಕಿ, ಮಾಜಿ ಶಾಸಕರೂ ಹಾಗೂ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ಸುನಿಲ್ ಹೆಗಡೆ, ರಾಷ್ಟ್ರೀಯ ಪರಿಷತ್ ಸದಸ್ಯರಾದ ಶ್ರೀ ಎಂ ಜಿ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಉಮೇಶ್ ನಾಯ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗೋವಿಂದ ನಾಯ್ಕ ಮತ್ತು ಹೊನ್ನಾವರ ಮಂಡಲದ ಅಧ್ಯಕ್ಷರಾದ ಶ್ರೀ ರಾಜೇಶ್ ಭಂಡಾರಿ ಪಾಲ್ಗೊಂಡರು.
ಕಾರ್ಯಕ್ರಮದ ಆರಂಭದಲ್ಲಿ ಮೌನಾಚರಣೆ ಮಾಡಲಾಯಿತು. ವೇದಿಕೆಯಲ್ಲಿದ್ದ ಪ್ರಮುಖರು ಹಾಗೂ ಪಾಲ್ಗೊಂಡ ಒಡನಾಡಿಗಳು ಡಾ. ಕರ್ಕಿಯವರ ಜೀವನದ ಕುರಿತಾಗಿ ಮಾತನಾಡಿ ನುಡಿ-ನಮನ ಸಲ್ಲಿಸಿದರು. ಕೊನೆಯಲ್ಲಿ ಭಾಗವಹಿಸಿದ ಎಲ್ಲರೂ ಪುಷ್ಪ ನಮನ ಸಲ್ಲಿಸುವ ಮೂಲಕ ಶೃದ್ಧಾಂಜಲಿ ಸಮರ್ಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಉಷಾ ಹೆಗಡೆ ಅವರು ನಿರ್ವಹಿಸಿದರು.
ಜಿಲ್ಲಾ ಪದಾಧಿಕಾರಿಗಳು, ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಡಾ. ಎಂ ಪಿ ಕರ್ಕಿಯವರ ಒಡನಾಡಿಗಳು ಹಾಗೂ ಅಭಿಮಾನಿಗಳು, ಎಸ್. ಡಿ. ಎಂ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.