ಹೊನ್ನಾವರ: ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ. ಬೈಕ್ ಸವಾರರು, ಮಾವಿನಗುಂಡಿ ಕಡೆಯಿಂದ ಬರುತ್ತಿದ್ದಾಗ ಹೊನ್ನಾವರ ಕಡೆಯಿಂದ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಗೇರುಸೊಪ್ಪಾ ಮಾಸ್ತಿಮನೆ ಬಳಿ ಈ ನಡೆದಿದೆ. ಅತಿವೇಗ ಮತ್ತು ಅಜಾಗರುಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕಾರು ಚಾಲಕ,ಬೈಕ್ ಸವಾರರಿಗೆ ಗುದ್ದಿದ್ದಾನೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ಉಮೇಶ ನಾಯ್ಕ ಹಾಗೂ ಹಿಂಬದಿ ಸವಾರ ನಿತೇಶ್ ನಾಯ್ಕನಿ ಅವರುಗೆ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಮುಂದಿನ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ.