ಕಾರವಾರ: ಮಹಿಳೆಯೊಬ್ಬಳು ಕಾರವಾರದ ಸರ್ವೋದಯ ನಗರದ ಕಮಲಾ ನಗರದ ದಿವೇಕರ ಕಾಲೇಜ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಗಾಯಗೊಂಡಿದ್ದಳು. ಈ ವೇಳೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಈ ವೇಳೆ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಒಂದು ಗಂಟೆಯೊಳಗಾಗಿ ಬೇರೆಡೆಗೆ ಚಿಕಿತ್ಸೆಗೆ ಒಯ್ಯುವಂತೆ ಸೂಚಿಸಿದರು.

ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಜಿಲ್ಲಾಸ್ಪತ್ರೆಯಲ್ಲಿನ ವೆಂಟಿಲೇಟರ್ ವಾಹನಕ್ಕೆ ಚಾಲಕರಿಲ್ಲದೇ ಎರಡು ಗಂಟೆಗಳ ಕಾಲ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿ ನಂತರದಲ್ಲಿ ಪರಿಸ್ಥಿತಿ ಬಿಗಡಾಯಿಸಿಕೊಂಡಿತು. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯ ಸಾರ್ವಜನಿಕರು ಆಸ್ಪತ್ರೆಗೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

RELATED ARTICLES  ಸಿಹೆಚ್‌ಆರ್‌ಡಿ ಪರೀಕ್ಷೆಯಲ್ಲಿ ಸಿವಿಎಸ್‌ಕೆ ವಿದ್ಯಾರ್ಥಿಗಳ ಸಾಧನೆ

ಗಂಭೀರ ಸ್ವರೂಪದ ಗಾಯಗಳಾಗಿದ್ದ ಮಹಿಳೆಗೆ ವೆಂಟಿಲೇಟರ್ ಹೊಂದಿದ್ದ ಆಂಬ್ಯುಲೆನ್ಸ್ ಬೇಕಾಗಿದ್ದರಿಂದ ಆಸ್ಪತ್ರೆಯಲ್ಲಿ ವಾಹನ ಇದ್ದರೂ ಚಾಲಕರಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಹರಸಾಹಸ ಪಡುವಂತಾಯಿತು. ಇದಕ್ಕಾಗಿ ಆಸ್ಪತ್ರೆ ಆವರಣದಲ್ಲಿ ಸೇರಿದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES  ಇಂದು ಉತ್ತರ ಕನ್ನಡದಲ್ಲಿ 108 ಕೊರೋನಾ ಪಾಸಿಟೀವ್ : ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ

ಕಲ ಸಮಯದ ನಂತರ ಆಂಬ್ಯುಲೆನ್ಸ್ ಚಾಲಕ ಬಂದ ಹಿನ್ನೆಲೆಯಲ್ಲಿ ಮಹಿಳೆಯನ್ನು ವೆಂಟಿಲೇಟರ್ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಅಪಘಾತಗಳ ಸಂದರ್ಭದಲ್ಲಿ ಈ ರೀತಿಯ ಸಮಸ್ಯೆಗಳು ಉಂಟಾದರೆ ಸಾರ್ವಜನಿಕರ ಜೀವ ಹಾನಿ ಸಂಭವಿಸಬಹುದು ಹಾಗಾಗಿ ಈ ರೀತಿಯ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬಂದಿದೆ.