ಬೆಂಗಳೂರು: ರಾಜ್ ಕುಟುಂಬದ ಕುಡಿ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಸುದ್ದಿ ಅಭಾನಿಗಳಲ್ಲಿ ತಲ್ಲಣ ಮೂಡಿಸಿದೆ. ಬಾಲ ಕಲಾವಿದನಾಗಿ ಕನ್ನಡ ಸಿನಿಮಾ ರಂಗಕ್ಕೆ ಪ್ರವೇಶಿಸಿದ ಇವರು 29 ಸಿನಿಮಾ ದಲ್ಲಿ ಬಾಲ ಕಲಾವಿದರಾಗಿ ಪಾತ್ರ ನಿರ್ವಹಿಸಿದರು. ಇವರ ಅದ್ಭುತ ನಟನೆಗೆ ಸಿಗದ ಪುರಸ್ಕಾರಗಳಿಲ್ಲ. ನಂತರ 2002 ರಲ್ಲಿ ಅಪ್ಪು ಸಿನಿಮಾದ ಮೂಲಕ ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು. 1999 ರಲ್ಲಿ ಚಿಕ್ಕಮಗಳೂರಿನ ಅಶ್ವಿನಿಯವರನ್ನು ವರಿಸಿದ್ದು ದೃತಿ ಮತ್ತು ವಂದಿತಾ ಎಂಬ ಇಬ್ಬರು ಮಕ್ಕಳಿದ್ದಾರೆ.

ಕೌಟುಂಬಿಕ ಹಿನ್ನೆಲೆ.

ಪುನೀತ್, ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಮಗನಾಗಿ ಜನಿಸಿದರು. ಇವರು ರಾಜಕುಮಾರ್ ದಂಪತಿಯ ಕಿರಿಯ ಮಗ. ನಟರಾದ ಶಿವರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್ ಸಹೋದರರು. ಪುನೀತ್ ಆರು ವರ್ಷದವರಿದ್ದಾಗ, ಅವರ ಕುಟುಂಬ ಬೆಂಗಳೂರಿಗೆ ತೆರಳಿತು.ಅವರು ಹತ್ತು ವರ್ಷ ವಯಸ್ಸಿನ ತನಕ ಅವರ ತಂದೆ ಅವರನ್ನು ಮತ್ತು ಅವರ ಸಹೋದರಿ ಪೂರ್ಣಿಮಾರನ್ನು ಚಲನಚಿತ್ರದ ಸೆಟ್ಗೆ ಕರೆದುಕೊಂಡು ಹೋಗುತ್ತಿದ್ದರು.ಪುನೀತ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು.ಇವರಿಗೆ ಇಬ್ಬರು ಪುತ್ರಿಯರಿದ್ದಾರೆ ದ್ರಿತಿ ಮತ್ತು ವಂದಿತಾ.ಇವರ ಮೊದಲ ಹೆಸರು ಮಾ.ಲೋಹಿತ್.

RELATED ARTICLES  ದಿನಾಂಕ 11/07/2019 ರ ದಿನ ಭವಿಷ್ಯ ಇಲ್ಲಿದೆ

ಹೀಗಿದ್ದರು ಪುನೀತ್..!

IMG 20211029 WA0001

ಭಾರತೀಯ ಚಿತ್ರನಟರಾಗಿ ,ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿದ್ದವರು ಇವರು. ಪುನೀತ್ ಅನೇಕಾನೇಕ ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ . ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ್ಯ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ಬಾಲನಟನೆಗೆ ರಾಷ್ಟ್ರ ಚಲನಚಿತ್ರ ಪ್ರಶಸ್ತಿಗೆ ಪಾತ್ರರಾದರು. ಪುನೀತ್ ಮೊದಲ ಪ್ರಮುಖ ಪಾತ್ರದಲ್ಲಿ 2002′ ಅಪ್ಪು ರಲ್ಲಿ ಅಭಿನಯಿಸಿದರು.ಅವರ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಇತರ ಯಶಸ್ವಿ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

RELATED ARTICLES  ಹಾಸನದಿಂದ ಕೇರಳಕ್ಕೆ ಹೋಗುತ್ತಿದ್ದ ಸ್ಫೋಟಕ ತುಂಬಿದ ಲಾರಿ ವಶ.

ಸಿನಿಪಯಣ

2002 ರಲ್ಲಿ ತೆರೆಕಂಡ ಪುರಿ ಜಗನ್ನಾಥ ನಿರ್ದೇಶನದ `ಅಪ್ಪು’ ಚಿತ್ರದಿಂದ ನಾಯಕನಟನಾಗಿ ಕನ್ನಡ ಚಿತ್ರರಂಗದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದರು. ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತು. ನಂತರ ತೆರೆಗೆ ಬಂದ ಅಭಿ,ವೀರ ಕನ್ನಡಿಗ, ಮೌರ್ಯ, ಆಕಾಶ್ , ನಮ್ಮ ಬಸವ, ಅಜಯ್ ಮುಂತಾದ ಚಿತ್ರಗಳು ಬಾಕ್ಸಾಫೀಸಿನಲ್ಲಿ ಒಳ್ಳೆ ದಾಖಲೆ ಮಾಡಿ ಅದ್ದೂರಿ ಪ್ರದರ್ಶನ ಕಂಡವು. 
ಇವರು ನಾಯಕನಾಗಿ ನಟಿಸಿದ ಮೊದಲ ಹತ್ತು ಚಿತ್ರಗಳು ಶತದಿನ ಪೂರೈಸಿದ್ದು ದಾಖಲೆ. ನಾಯಕನಾಗಿ ಎರಡು ರಾಜ್ಯ ಪ್ರಶಸ್ತಿ, ನಾಲ್ಕು ಫಿಲ್ಮಫೇರ್,ಎರಡು ಸೈಮಾ ಹೀಗೆ ಹತ್ತು ಹಲವು ಪ್ರಶಸ್ತಿ ಪಡೆದಿದ್ದಾರೆ.

ಪುನೀತ್ ಅವರನ್ನು ಕಳೆದುಕೊಂಡ ಕುಟುಂಬ ಹಾಗೂ ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಕಂಠೀರವ ಸ್ಟೇಡಿಯಮ್ ನಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು ನಾಳೆವರೆಗೆ ಅಭಿಮಾನಿಗಳಿಗೆ ದರ್ಶನದ ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ.