ಕೆರೆಯಲ್ಲಿ ಬಿದ್ದ ಕಡವೆ ರಕ್ಷಣೆ.
ಕುಮಟಾ: ತಾಲೂಕಿನ ಅಳಕೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತಗಾಲ ಉಪ್ಪಿನಪಟ್ಟಣದ ನೀರು ತುಂಬಿದ ಬೃಹತ್ ಕೆರೆಯಲ್ಲಿ ಬಿದ್ದ ಕಡವೆಯನ್ನು ಕುಮಟಾದ ಅಗ್ನಿಶಾಮಕದಳ ಸಿಬ್ಬಂದಿ ಸುರಕ್ಷಿತವಾಗಿ ಕೆರೆಯಿಂದ ಮೇಲೆತ್ತಿ ಇಂದು ಬೆಳಿಗ್ಗೆ ರಕ್ಷಿಸಿದ್ದಾರೆ. ಕರೆಯಲ್ಲಿ ಬಿದ್ದ ಕಡವೆಯನ್ನು ಸಾರ್ವಜನಿಕರು ಗಮನಿಸಿ ಮಾಹಿತಿ ನೀಡಿದ್ದಾರೆ. ಸಾಕಷ್ಟು ಹೊತ್ತು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು.
ಯಲ್ಲಾಪುರ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಲ್ಲಿನ ವಜ್ರಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಂಕೋಲಾ ಕಡೆಯಂದ ಯಲ್ಲಾಪರ ಕಡೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯವಾಗಿದ್ದು, ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.