ಶಿರಸಿ: ಬೇರೆ ಬೇರೆ ಉದ್ಯೋಗ ಮಾಡಿಕೊಂಡು ಹೊಟ್ಟೆ ಹೊರೆದುಕೊಳ್ಳುವ ಅದೆಷ್ಟೋ ಜನ ಸಾಲದ ಸುಳಿಯಲ್ಲಿ ಸಿಲುಕಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಘಟನೆ ಹೊಸದಲ್ಲದಿದ್ದರೂ ವಯೋವೃದ್ಧೆಯೋರ್ವಳು ತನ್ನ ಮಗನ ಮದುವೆಗಾಗಿ ಮಾಡಿದ ಸಾಲವನ್ನು ತೀರಿಸಲು ಸಾಧ್ಯವಾಗಿಲ್ಲ ಎಂಬ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಗುಳಿ ಬಳಿ ನಡೆದಿದೆ.
ಗಂಗೆ ಸೋಮು ಗೌಡ (65) ಎಂಬುವಳೇ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆ ಈ ಹಿಂದೆ ಮಗನ ಮದುವೆಗಾಗಿ ಖಾಸಗಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದಳು. ಆದರೆ ಮಗನ ಮದುವೆಯಾಗಿ ಮೂರು ವರ್ಷವಾದರೂ ಸಾಲ ತೀರಿಸಲು ಆಗದೇ ಇದ್ದ ಹಿನ್ನೆಲೆಯಲ್ಲಿ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು
ಪಿ.ಎಸ್.ಐ. ಈರಯ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.