ಶಿರಸಿ: ಮಹಿಳೆಯರು ಹಾಗೂ ಬಾಲಕರಿಯರ ನಾಪತ್ತೆ ಪ್ರಕರಣದ ಬೆನ್ನಲ್ಲೇ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು‌ ಈ ವಿಚಾರ ಇದೀಗ ಎಲ್ಲೆಡೆ ಸುದ್ದಿಯಾಗುತ್ತಿದೆ.

ಬಿಳಿ ಬಣ್ಣದ ಕಾರಿನಲ್ಲಿ ಬಂದ ಮೂವರು ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂಬ ಬಗ್ಗೆ ಪ್ರಕರಣವೊಂದು ದಾಖಲಾಗಿದೆ. ತನ್ನ ಮಗಳನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಆಕೆಯ ತಾಯಿ ನಗರದ ಗ್ರಾಮೀಣ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.

RELATED ARTICLES  "ಕಾಲೇಜು ವಿದ್ಯಾರ್ಥಿ ಪ್ರಜ್ವಲ್ ಶೇಟರಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಿಗೆ ಮನವಿ."

ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರಕಾರಿ ಡಿಗ್ರಿ ಕಾಲೇಜು ಸಮೀಪವಿರುವ ಕ್ರಾಸ್ ಒಂದರಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ ಎಂದು ಯುವತಿಯ ತಾಯಿ ಆರೋಪಿಸಿದ್ದಾಳೆ. ಈ ಘಟನೆಯಿಂದ ಸಾರ್ವಜನಿಕರು ಕಂಗಾಲಾಗಿದ್ದು, ಪೋಲೀಸರು ಆರೋಪಿಗಳ ಪತ್ತೆ ಬಲೆ ಬೀಸಿದ್ದಾರೆ. ಪೊಲೀಸ್ ತನಿಖೆಯ ನಂತರದಲ್ಲಿ ಪೂರ್ಣವಾದ ಮಾಹಿತಿ ಹೊರಬರಲಿದ್ದು, ತನಿಖೆ ಪ್ರಗತಿಯಲ್ಲಿದೆ ಎನ್ನಲಾಗಿದೆ.

RELATED ARTICLES  ಬೃಹದಾಕಾರದ ಮರ ತೆರವುಗೊಳಿಸದಿದ್ದರೆ ಅಪಾಯ ಖಂಡಿತ. ಕಾಗಾಲದ ಜನತೆಯ ಅಭಿಮತ.