ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ರಾ.ಹೆ. ೬೬ರ ಸೋಡಿಗದ್ದೆ ತಿರುವಿನ ಬಳಿ ಸರಣಿ ಅಪಘಾತ ಸಂಭವಿಸಿದೆ.
ಮೂರು ಬಸ್ಸು ಹಾಗೂ ಮೀನಿನ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಮೀನು ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದಂತೆ ೨೫ ಮಂದಿ ಗಾಯಗೊಂಡಿದ್ದು, ಬಸ್ಸಿನ ಚಾಲಕನೋರ್ವ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಮಣಿಪಾಲ ಹಾಗೂ ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಮಂಗಳೂರಿನಿಂದ ಬೆಳಗಾವಿ ಕಡೆ ಸಾಗುತ್ತಿದ್ದ‌ ಗಣೇಶ ಸಂಸ್ಥೆಯ ಬಸ್ಸು ಹಾಗೂ ಗೋವಾದಿಂದ ಕೇರಳಕ್ಕೆ ತೆರಳುತ್ತಿದ್ದ ಮೀನು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದೇ ವೇಳೆ ಬಸ್ಸಿನ ಹಿಂಭಾಗದಲ್ಲಿದ್ದ ಇನ್ನೆರಡು ಬಸ್ಸುಗಳು ಚಾಲಕನ ನಿಯಂತ್ರಣ ತಪ್ಪಿ ಗಣೇಶ ಸಂಸ್ಥೆಯ ‌ಬಸ್ಸಿಗೆ ಗುದ್ದಿದೆ.
ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಹನುಮಂತ ಬೆಣ್ಣೆ ನೆಲ್ಲಿಕೇರಿ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಎರಡು ದಿನಗಳ ಪ್ರಕೃತಿ ಶಿಬಿರ