ಬಾಗಲಕೋಟೆ: ಹಾಡುಹಗಲೇ ದುಷ್ಕರ್ಮಿಗಳು ಅಂಗಡಿಯಲ್ಲಿದ್ದ ಒಂದು ಲಕ್ಷ ರೂಪಾಯಿ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಕಲಾದಗಿ ಗ್ರಾಮದಲ್ಲಿ ನಡೆದಿದೆ.

ಬಸ್ ನಿಲ್ದಾಣದ ಬಳಿ ಇರುವ ಬಸವರಾಜ ಹಿರೇಮಠ  ಅವರ ಡ್ರಿಪ್ ಮತ್ತು ಪೈಪ್ ಅಂಗಡಿಗೆ ವಸ್ತು ಕೊಳ್ಳುವ ಸೋಗಿನಲ್ಲಿ ಕಳ್ಳರು ಅಂಗಡಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಾಲೀಕನ ದೃಷ್ಟಿ ಬೇರೆಡೆ ಸೆಳೆದು ಒಂದು ಲಕ್ಷ ಹಣ ಕದ್ದು ಪರಾರಿ ಯಾಗಿದ್ದಾರೆ.  ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಿಸಲಾಗಿದ್ದು, ಇತ್ತೀಚೆಗೆ ನಗರದಲ್ಲಿ ಕಳ್ಳರ ಸಂಖ್ಯೆ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

RELATED ARTICLES  ಕಾಂಗ್ರೆಸ್‌ ಸರಕಾರ ಒಂದು ವರ್ಗದ ಜನರನ್ನು ಮಾತ್ರ ಓಲೈಸುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ ಆರೋಪ.