ಯಲ್ಲಾಪುರ: ರಾಜ್ಯದಿಂದ ಜನ ಸ್ವರಾಜ್ ಸಮಾವೇಶದ ಸಾರಥ್ಯ ವಹಿಸಿ, ಉತ್ತರಕನ್ನಡ ಜಿಲ್ಲೆಗೆ ಬಂದಿರುವ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ತಂಡವನ್ನು ಜಿಲ್ಲೆಯ ಈಶ್ವರಿ ವಿಶ್ವವಿದ್ಯಾಲಯ ಯಲ್ಲಾಪುರದ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಬಿಟ್ ಕಾಯಿನ್ ಬಗ್ಗೆ ಮಾಹಿತಿ ಇಲ್ಲದೇ ಚರ್ಚೆಯಾಗುತ್ತಿದೆ. ಯಾರಲ್ಲಿ ಈ ಬಗ್ಗೆ ಸರಿಯಾದ ಮಾಹಿತಿ ಇದೆಯೊ ಅವರು ನೀಡಿದರೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಯಾವ ಪಕ್ಷದವರೇ ಆದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು. ಉ.ಕ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭತ್ತ, ಅಡಕೆ, ಶುಂಠಿ, ಜೋಳ ಮುಂತಾದ ಬೆಳೆಗಳಿಗೆ ಹಾನಿಯಾಗಿದೆ. ರೈತರಿಗೆ ಸೂಕ್ತ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶೀಘ್ರ ಆ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಕ್ಷೇತ್ರಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿ.ಪ ಚುನಾವಣೆಯಲ್ಲಿ 15 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ, ಸಾರಿಗೆ ಸಚಿವರಾದ ಶ್ರೀ ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಮ್.ಬಿ.ನಂದೀಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ರವಿಕುಮಾರ್ ಜೀ, ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ನಾಯಕ, ಶಾಸಕರುಗಳಾದ ಶ್ರೀ ದಿನಕರ ಶೆಟ್ಟಿ, ಶ್ರೀಮತಿ ರೂಪಾಲಿ ನಾಯ್ಕ, ಶ್ರೀ ಸುನೀಲ ನಾಯ್ಕ, ಪರಿಷತ್ ಸದಸ್ಯರಾದ ಶ್ರೀ ಶಾಂತಾರಾಮ ಸಿದ್ಧಿ, ಮಾಜಿ ಶಾಸಕರಾದ ಶ್ರೀ ಸುನೀಲ ಹೆಗಡೆ, ಶ್ರೀ ಪ್ರಮೋದ ಹೆಗಡೆ, ವಿಭಾಗ ಪ್ರಭಾರಿ ಶ್ರೀ ಗಿರೀಶ್ ಪಟೇಲ್, ವಿಭಾಗ ಸಹಪ್ರಭಾರಿಗಳಾದ ಶ್ರೀ ಎನ್.ಎಸ್.ಹೆಗಡೆ, ಜಿಲ್ಲಾ ಪ್ರಭಾರಿ ಶ್ರೀಮತಿ ಭಾರತಿ ಜಂಬಗಿ, ಜಿಲ್ಲಾ ಸಹಪ್ರಭಾರಿಗಳಾದ ಶ್ರೀ ಪ್ರಸನ್ನ ಕೆರೆಕೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗೋವಿಂದ ನಾಯ್ಕ, ಶ್ರೀ ಚಂದ್ರು ಎಸಳೆ, ಶ್ರೀಮತಿ ಉಷಾ ಹೆಗಡೆ, ಶ್ರೀ ಆರ್.ಡಿ. ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಜಿ.ನಾಯ್ಕ, ಹಾಗೂ ಮಂಡಲ ಅಧ್ಯಕ್ಷರು, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಮುಖಂಡರು, ಎಲ್ಲಾ ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.