ಹೊನ್ನಾವರ : ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದ್ದು, ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಾಲೂಕಿನ ಕರ್ಕಿ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ. ಲಾರಿ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ಪ್ರಯಾಣಿಕರು ಗಾಯಾಗೊಂಡಿದ್ದಾರೆ. ಲಾರಿ ಭಟ್ಕಳ ಕಡೆಯಿಂದ ಕುಮಟಾ ಮಾರ್ಗವಾಗಿ ತೆರಳುತ್ತಿತ್ತು. ಅದೇ ಸಂದರ್ಭದಲ್ಲಿ ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್. ಟಿ.ಸಿ ಬಸ್ಸ್ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಕುಮಟಾ, ಮುರ್ಡೇಶ್ವರ, ಬೈಂದೂರು ಸೇರಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು ಎನ್ನಲಾಗಿದೆ.
ಲಾರಿ ಚಾಲಕನ ಚಾಲಕ ಜೋಸ್ ಮಾಥವ್ ಎಂಬಾತನ ನಿರ್ಲಕ್ಷ ಮತ್ತು ಅಜಾಗರುಕತೆಯಿಂದ ಚಾಲನೆಯೇ ಘಟನೆಗೆ ಕಾರಣ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ರಂಗಪ್ಪ ಮಾದರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.