ಶಿರಸಿ : ತಾಲೂಕಿನ ವಡಗೇರಿ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕುಮಟಾ ಪೊಲೀಸ್ ಠಾಣೆಯ ಎ.ಎಸ್.ಐ ನಾಗರಾಜಪ್ಪ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸ್ಥಳೀಯ ಮಾಹಿತಿ ಲಭ್ಯವಾಗಿದೆ.
ಗಾಯಗೊಂಡಿರುವ ಕುಮಟಾ ಪೊಲೀಸ್ ಠಾಣೆಯ ಎ.ಎಸ್.ಐ ನಾಗರಾಜಪ್ಪ ಅವರಿಗೆ ಅಪಘಾತದಲ್ಲಿ ತೀವ್ರವಾಗಿ ಗಾಯಗಳಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.