ಕಾರವಾರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳ ಸಹಾಯ ಧನಕ್ಕಾಗಿ 2021-22 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗಾಗಿ ಸಹಾಯಧನ 5000 ಮತ್ತು 25,000 ರೂ.ಗಳ ಕ್ರೀಡಾ ಸಾಮಾಗ್ರಿಗಳನ್ನು ನೀಡುವಯೋಜನೆ ಜಾರಿಯಲ್ಲಿದೆ.
ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದಯುವಜನ ಸಂಘ ಸಂಸ್ಥೆಗಳು, ಸಹಕಾರ ಸಂಘಗಳ ಇಲಾಖೆಯಲ್ಲಿ ನೋಂದಾವಣೆ ಮಾಡಿ ಡಿಸೆಂಬರ್ 30 ರೊಳಗಾಗಿ ಸಹಾಯಧನ ಪ್ರಯೋಜನವನ್ನು ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾಯುವಸಬಲೀಕರಣ ಮತ್ತುಕ್ರೀಡಾ ಇಲಾಖೆ ಕಾರವಾರ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಸಹಾಯಕ ನಿರ್ದೇಶಕಿ ಗಾಯತ್ರಿ ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.