ಕಾರವಾರ : ಶಿರಸಿಯ ವಿವಿಧ ಬಡಾವಣೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಂಜಾ ಮಾರಾಟ ಹಾಗೂ ಸೇವನೆ ಆರೋಪದಲ್ಲಿ ಸುಮಾರು 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿರಸಿ ನಗರದ ಕಸ್ತೂರಬಾ ನಗರ, ನೆಹರೂ ನಗರ ಸೇರಿದಂತೆ ವಿವಿದೆಡೆಯಿಂದ ಯುವಕರನ್ನು ಗಾಂಜಾ ಸೇವನೆ ಹಾಗೂ ಮಾರಾಟದ ಆರೋಪದ ಮೇರೆಗೆ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ವೈದ್ಯಕೀಯ ಪರೀಕ್ಷೆಗೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

RELATED ARTICLES  ಉತ್ತರ ಕನ್ನಡದಲ್ಲಿ ಕೊರೋನಾ ಆರ್ಭಟ : ಈವರೆಗಿನ ಅತಿಹೆಚ್ಚು ಪ್ರಕರಣ ದಾಖಲು.

ಡಿವೈಎಸ್ ಪಿ ರವಿ ಡಿ.ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 15 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES  ಆಂಗ್ಲ ಭಾಷೆಯನ್ನು ವ್ಯವಹಾರಕ್ಕಾಗಿ ಬಳಸಿಕೊಂಡು ಕನ್ನಡವನ್ನು ಉಸಿರಾಗಿಸಿಕೊಳ್ಳಬೇಕು!