ಕಾರವಾರ: ದೇಶದ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡ ಶಿವನ ಕ್ಷೇತ್ರ ಮುರುಡೇಶ್ವರದ ಶಿವನ ಬೃಹತ್ ಪ್ರತಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು ಬಿದ್ದಿದೆ ಎಂಬ ಭಯಾನಕ ಮಾಹಿತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಐಸಿಸ್ ಮುಖವಾಣಿ ಪತ್ರಿಕೆ ‘the VOICE OF HIND’ನಲ್ಲಿ ಮುರುಡೇಶ್ವರದ ಶಿವನ ಪ್ರತಿಮೆಯ ಪೋಟೋ ಹಾಕಿದ್ದು, ಅದರ ಮೇಲೆ ‘Its time to Break False Gods’ ಎಂ ಬರಹವನ್ನು ಹಾಕಲಾಗಿದೆ ಎಂದು ಟ್ವಿಟರ್ ಮತ್ತು ಫೇಸ್ಬುಕ್ ಪೋಸ್ಟ್ ಹಾಕಿರುವ ಅಂಶುಲ್ ಸಕ್ಸೇನಾ ಎಂಬ ಯುವಕ ಹಂಚಿಕೊಂಡಿದ್ದಾನೆ.
ಜೊತೆಗೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ಅದರ ತುತ್ತ ತುದಿಗೆ ಐಸಿಸ್ ರೀತಿಯ ಧ್ವಜ ಹಾರಾಡುವಂತೆ ಚಿತ್ರಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಈ ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅವರು ಫೇಸ್ ಬುಕ್ ಹಾಗೂ ಟ್ಟಿಟರ್ ನಲ್ಲಿ ಆಗ್ರಹಿಸಿದ್ದಾರೆ.
ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರಕಾರ ಅವಕಾಶ ನೀಡಬಾರದು ಎಂಬುದು ಸಾರ್ವಜನಿಕರ ಆಗ್ರಹಿಸಿದ್ದಾರೆ.