ಕಾರವಾರ : ಅಲ್ಲಲ್ಲಿ ಕೇಳಿಬರುತ್ತಿದ್ದ ಬೈಕ್ ಕಳ್ಳತನದ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಬೈಕ್ ಕಳ್ಳತನ ಮಾಡಿ ತಲೆ‌ಮರೆಸಿಕೊಂಡಿದ್ದ ಅಂತರ ಜಿಲ್ಲಾ ಕಳ್ಳನ್ನನ್ನು ಕಾರವಾರ ಗ್ರಾಮೀಣ ಪೊಲೀಸರು ಬಂಧಿಸಿ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

RELATED ARTICLES  ಅನಧಿಕೃತ ಮದ್ಯ ಮಾರಾಟ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಮಹಿಳೆಯರು

ಕಾರವಾರ ನಗರದ ಶಿರವಾಡದ ಬಂಗಾರಪ್ಪ ನಗರದ ಆನಂದ ಛಲವಾಧಿ ಬಂಧಿತ ಆರೋಪಿಯಾಗಿದ್ದಾನೆ. ಈತ ಚೆಂಡಿಯಾದ ಸಿದ್ದೇಶ ನಾಯ್ಕ ಎಂಬುವವರ ಬೈಕ್ ಕಳ್ಳತನ ಮಾಡಿದ್ದು, ಈ ಬಗ್ಗೆ ಸಿದ್ದೇಶ ಅವರು ಕಳೆದ ಒಂದು ತಿಂಗಳ ಹಿಂದೆ ಕಾರವಾರ ಗ್ರಾಮೀಣ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನ ಬಂಧಿಸಿದ್ದು,‌ಬಂಧನದ ಬಳಿಕ ಆತನ ವಿರುದ್ಧ ಕಾರವಾರದ ಚಿತ್ತಾಕುಲ್ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಳ್ಳತನ ಪ್ರಕರಣ ದಾಖಲಾಗಿರುವುದು ಗೊತ್ತಾಗಿದೆ.

RELATED ARTICLES  ಅಕ್ರಮ ಜಾನುವಾರು ಸಾಗಾಟ : ಇಬ್ಬರು ಪೊಲೀಸ್ ಬಲೆಗೆ