ಹೊನ್ನಾವರ : ಡಿ.10ರಂದು ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2021ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಭೀಮಣ್ಣಾ ನಾಯ್ಕ ಇಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅವರು ದಿ. 27ರ ಶನಿವಾರ ಮುಂಜಾನೆ 11 ಘಂಟೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ, ಕೆ.ಪಿ.ಸಿ.ಸಿ. ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಸೆಲ್‍ಗಳ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಭಾಗವಹಿಸುವ ಈ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.