ಶಿರಸಿ : ಉತ್ತರ ಕನ್ನಡದಲ್ಲಿ ಒಂದಿಲ್ಲೊಂದು ತಾಲ್ಲೂಕುಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿದೆ. ಬದುಕಿ ಬಾಳಬೇಕಾದ ಹಾಗೂ ಸಮಾಜವನ್ನು ಎದುರಿಸಬೇಕಾದ ಜನರು ಆತ್ಮಹತ್ಯೆಗೆ ಶರಣಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಇಂತಹುದೇ ಒಂದು ಪ್ರಕರಣ ಇಂದು ವರದಿಯಾಗಿದ್ದು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಹೆಚ್ಚಾದ ಸಾಲ ಬಾದೆಯಿಂದ ಇವರು ಆತ್ಮಹತ್ಯೆಗೆ ಶರಣಾದ ಬಗ್ಗೆ ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿದ್ದು ಸುತ್ತಲ ಜನರು ಈ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ದೊಡ್ಡಳ್ಳಿ ಮೂಲದ ಹಾಲಿ ಹನುಮಗಿರಿಯಲ್ಲಿ ವಾಸವಿದ್ದ ಸೀತಾರಾಮ ಜೋಗಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಇವರು ಹಲವು ವರ್ಷಗಳಿಂದ ರಿಯಲ್ ಎಸ್ಟೇಟ್ ದಂದೆ ನಡೆಸುತ್ತಿದ್ದ ಈತ ವ್ಯವಹಾರದ ಸಲುವಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದನೆಂದು ತಿಳಿದು ಬಂದಿದೆ. ಸಾಲ ತೀರಿಸಲು ಆಗದೇ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.