ಹೊನ್ನಾವರ: ತಾಲೂಕಿನ ಕರ್ಕಿಯ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಬಗ್ಗೆ ವರದಿಯಾಗಿದೆ. ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷತನದಿಂದ ಲಾರಿ ಚಲಾಯಿಸಿಕೊಂಡು ಬಂದು ಚಾಲಕ ಹಳದೀಪುರದಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

RELATED ARTICLES  ಸೋಮವಾರದಂದು ಸಿ ವಿ ಎಸ್ ಕೆ ಪ್ರೌಢಶಾಲೆಯಲ್ಲಿ ತಾಲೂಕಾ ಮಟ್ಟದ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ.

ಕರ್ಕಿ ಹೆಗಡೆಹಿತ್ಲದ ನಿವಾಸಿ ಭರತ್ ವಿಶ್ವನಾಥ ನಾಯ್ಕ(27) ಈತನಿಗೆ ಅಪಘಾತದಿಂದ ಗಂಭೀರ ಗಾಯವಾಗಿದೆ. ಈತನ ತಲೆ, ಹಾಗೂ ಕೈ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೊರ ಜಿಲ್ಲೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೆ ಬಿಟ್ಟು ಲಾರಿ ಚಾಲಕ ಪರಾರಿಯಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಪರೇಶ ಮೇಸ್ತ ಪ್ರಕರಣ : ದಿ.೭ರಂದು ಹೊನ್ನಾವರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಜನ ಜಾಗೃತಿ