ಕಾರವಾರ: ವಿದ್ಯುತ್ ಹರಿಯುತ್ತಿದ್ದ ವಿದ್ಯುತ್ ಲೈನ್ ಒಂದು ರಸ್ತೆಗೆ ಬಿದ್ದಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಯವರು ಗಾಯಗೊಂಡ ಘಟನೆ ಕಾರವಾರ ತಾಲೂಕಿನಿಂದ ವರದಿಯಾಗಿದೆ. ತಾಲೂಕಿನ ಗೋಟೆಗಾಳಿ ಗ್ರಾಮ ಪಂಚಾಯತಿಯ ಲಾಂಡೆ ವಪೆ ಬಳಿ ತುಂಡಾಗಿ ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಗಾಯಗೊಂಡ ಕಾಮೇಶ್ವರ ಕಾಶಿನಾಥ ಕಾಜೂಗಾರ ಎಂಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ.
ಶಾಸಕರ ನೆರವು.
ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಗಾಯಗೊಂಡ ಕಾಮೇಶ್ವರ ಕಾಶಿನಾಥ ಕಾಜೂಗಾರನನ್ನು ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವ ಮೂಲಕ ಶಾಸಕಿ ರೂಪಾಲಿ ಎಸ್.ನಾಯ್ಕ ಮಾನವೀಯತೆ ಮೆರೆದಿದ್ದಾರೆ.
ಯುವಕ ಬೈಕ್‌ನಲ್ಲಿ ಸಾಗುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡ ವಿಷಯ ತಿಳಿದ ಕೂಡಲೇ ಜಿಲ್ಲಾ ಆಸ್ಪತ್ರೆಗೆ ಒಯ್ಯಲು ಕ್ರಮಕೈಗೊಂಡರು. ಹೆಚ್ಚಿನ ಚಿಕಿತ್ಸೆಗಾಗಿ ಗೋವಾದ ಬಾಂಬೋಲಿಯಮ್ ಆಸ್ಪತ್ರೆಗೆ ಕಳುಹಿಸಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ.
ಅಲ್ಲದೇ, ವಿದ್ಯುತ್ ತಂತಿ ತುಂಡಾಗಿರುವುದನ್ನು ಕೂಡಲೆ ಸರಿ ಮಾಡಲು ಹೆಸ್ಕಾಂ ಎಇಇ ಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕು. ಹಾಗೂ ಗ್ರಾಮೀಣ ಪ್ರದೇಶದಲ್ಲಿ
ವಿದ್ಯುತ್ ತಂತಿಗಳ ಪರಿಶೀಲನೆ ಮಾಡಿ ಸಂಭವಿಸಬಹುದಾದ ಅವಘಡವನ್ನು ತಪ್ಪಿಸಲು ಕ್ರಮ ಕೈಗೊಳ್ಳಯವಂತೆ ಸೂಚನೆ
ನೀಡಿದ್ದಾರೆ. ಕೂಡಲೆ ದೂರವಾಣಿ ಮೂಲಕ ತಹಸೀಲ್ದಾರ್, ಕಂದಾಯ ಅಧಿಕಾರಿ, ಹೆಸ್ಕಾಂ ಎಇಇ ಅವರನ್ನು ಸಂಪರ್ಕಿಸಿ ಸ್ಥಳಕ್ಕೆ ಕಳುಹಿಸಿ ವಿದ್ಯುತ್ ತಂತಿ ತಗುಲಿದ ವ್ಯಕ್ತಿಗೆ ಶೀಘ್ರದಲ್ಲಿ
ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಸೂಚನೆ ನೀಡಿದ್ದಾರೆ.