ಕಾರವಾರ : ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆಯಿಂದ ವರ್ತಿಸಿ ಪರಿಚಯ ಮಾಡಿಕೊಂಡು ನಂತರ ನಿನ್ನ ಜೊತೆ ಮಾತನಾಡುವುದಿದೆ ಎಂದು ನಂಬಿಸಿ ಶಿರಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಆಕೆಯೊಂದಿಗೆ ಅಸಭ್ಯ ವರ್ತನೆ ತೊರಿದ್ದು ಲೈಂಗಿಕ ಕಿರುಕುಳ ನೀಡಿದ್ದು ಬಾಲಕಿಯ ತಂದೆ ಬಂದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿರುವ ಬಗ್ಗೆ ವರದಿಯಾಗಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಯುವಕನನ್ನು ಪೊಲೀಸರು ಬಂಧಿಸಿದ ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಮೂಲತಹಾ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮೌಲಾಲಿ ದಾದೆಅಲಿ ಖಾನ್(26) ಬಂಧಿತ ಆರೋಪಿಯಾಗಿದ್ದಾನೆ.
ಈತನು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ನಿನ್ನಜೊತೆ ಮಾತನಾಡುವುದಿದೆ ಎಂದು ನಂಬಿಸಿ ಶಿರಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಆಕೆಯೊಂದಿಗೆ ಅಸಭ್ಯ ವರ್ತನೆ ತೊರಿದ್ದು ಲೈಂಗಿಕ ಕಿರುಕುಳ ನೀಡಿದ್ದು ಬಾಲಕಿಯ ತಂದೆ ಬಂದ ನಂತರ ಪರಾರಿಯಾಗಿದ್ದ. ಈ ಸಂಬಂಧ ಆರೋಪಿ ವಿರುದ್ಧ ಶಿರಸಿ ಠಾಣೆಯಲ್ಲಿ ಬಾಲಕಿ ತಂದೆ ದೂರು ನೀಡಿದ್ದು ಆರೋಪಿಯನ್ನು ಶಿರಸಿ ಠಾಣೆ ಪೊಲೀಸರು ಪೋಕ್ಸೋ ಮತ್ತು SC/ST ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜುರು ಪಡಿಸಿದ್ದಾರೆ.