ಭಟ್ಕಳ : ತಾಲೂಕಿನ ಶಿರಾಲಿಯ ಚಿತ್ರಾಪುರದಲ್ಲಿ ಗ್ಯಾರೇಜ್ ಮಾಡಿಕೊಂಡಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ವರದಿಯಾಗಿದೆ. ಜೀವನದಲ್ಲಿ ಜಿಗುಪ್ಪೆ ಹೊಂದಿ ಮನೆಯ ಸಮೀಪದ ಬೆಟ್ಟಕ್ಕೆ ಹೋಗಿ ಅಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದಾಗಿ ಸ್ಥಳೀಯರು ಮಾತನಾಡುತ್ತಿದ್ದಾರೆ.

RELATED ARTICLES  ಉತ್ತರಕನ್ನಡದ ಇಂದಿನ ಕೊರೋನಾ ಹೆಲ್ತ ಬುಲೆಟಿನ್

ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಯುವಕನನ್ನು ನಾರಾಯಣ ಚಿತ್ರಾಪುರ ಉಮೇಶ ನಾಯ್ಕ(30) ಎಂದು ಗುರುತಿಸಲಾಗಿದೆ. ಈತ ತನ್ನ ಮನೆಯ ಹತ್ತಿರದಲ್ಲಿರುವ ಬೆಟ್ಟಕ್ಕೆ ಹೋಗಿ ಅಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್‌ಐ ರತ್ನಾ ಎಸ್ ತನಿಖೆ ಕೈಗೊಂಡಿದ್ದಾರೆ.

RELATED ARTICLES  ಶಿರಸಿ ಜೀವಜಲ ಕಾರ್ಯಪಡೆಯಿಂದ ಉತ್ತಮ ಕಾರ್ಯ