ಭಟ್ಕಳ : ಉತ್ತರಕನ್ನಡದ ಬೇರೆಬೇರೆ ತಾಲೂಕುಗಳಲ್ಲಿ ಒಂದಿಲ್ಲೊಂದು ಅಪಘಾತ ಪ್ರಕರಣಗಳು ವರದಿಯಾಗುತ್ತಿದೆ. ಇಂದು ಸಹ ತಾಲೂಕಿನ ಗೊರಟೆ ಕ್ರಾಸ್ ಸಮೀಪ ಅಕ್ಕನ ಮನೆಗೆ ತೆರಳುತ್ತಿರುವ ವೇಳೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

RELATED ARTICLES  ಬೈಕ್ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್
Point Blur Dec012021 135329

ಗಾಯಗೊಂಡ ಬೈಕ್ ಸವಾರ ಯೋಗೇಶ ನಾಯ್ಕ ಎಂದು ತಿಳಿದು ಬಂದಿದೆ. ಈತ ಭಟ್ಕಳದಿಂದ ಗೊರಟೆಯಲ್ಲಿರುವ ತನ್ನ ಅಕ್ಕನ ಮನೆಗೆ ತೆರಳುತ್ತಿರುವ ವೇಳೆ ಕುಂದಾಪುರದಿoದ ಕಾರವಾರ ಕಡೆಗೆ ತೆರಳುತ್ತಿದ್ದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ.

RELATED ARTICLES  ಮುರೂರು-ಕಲ್ಲಬ್ಬೆ ಮತ್ತು ವಾಲಗಳ್ಳಿ-ಕೂಜಳ್ಳಿಯಲ್ಲಿ ದಿನಸಿ ವಸ್ತುಗಳ ಕಿಟ್ ವಿತರಿಸಿದ ಮಾಜಿ ಶಾಸಕಿ ಶಾರದಾ ಶೆಟ್ಟಿ.

ಪರಿಣಾಮ ಬೈಕ್ ಸವಾರ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುವನ್ನು ಪ್ರಥಮ ಚಿಕಿತ್ಸೆಗೆ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು , ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.