ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2021 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೀಮಣ್ಣಾ ನಾಯ್ಕರ ಚುನಾವಣಾ ಪ್ರಚಾರಾರ್ಥ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಹೊನ್ನಾವರ ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅವರು ಗುರುವಾರ ಮಧ್ಯಾಹ್ನ 2-00 ಘಂಟೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಪಟ್ಟಣದ ಪ್ರಭಾತನಗರದಲ್ಲಿರುವ “ಸಾಗರ ರೆಸಿಡೆನ್ಸಿ” ಸಭಾಭವನದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರಾರ್ಥ ಏರ್ಪಡಿಸಿದ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

RELATED ARTICLES  ಗಿಡಗಳನ್ನು ನೆಟ್ಟು ಪೋಷಿಸುವುದು ನಮ್ಮೆಲ್ಲರ ಕರ್ತವ್ಯ ; ನ್ಯಾ. ಸುನೀತಾ

ಸಭೆಯಲ್ಲಿ ಮಾಜಿ ಶಾಸಕಿ ಶ್ರೀಮತಿ ಶಾರದಾ ಎಮ್. ಶೆಟ್ಟಿ, ಪಟ್ಟಣ ಮತ್ತು ಗ್ರಾಮ ಪಂಚಾಯತದ ಸದಸ್ಯರುಗಳು, ಪಕ್ಷದ ವಿವಿಧ ಪದಾಧಿಕಾರಿಗಳು ಭಾಗವಹಿಸುವ ಈ ಸಭೆಯಲ್ಲಿ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳ್ಳುವಂತೆ ಜಗದೀಪ ಎನ್. ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

RELATED ARTICLES  ಶಿರಸಿ- ಕುಮಟಾ ರಸ್ತೆ ಅಗಲೀಕರಣ ಯೋಜನೆಯಿಂದ ಸಂಭವಿಸಲಿದೆ ಭೂ ಕುಸಿತ! ಯೋಜನೆಯ ಪುನರ್ ಪರಿಶೀಲನೆ ಮಾಡುವಂತೆ ಮನವಿ ಸಲ್ಲಿಕೆ.