ಕಾರವಾರ : ಡಿ.ಆರ್.ಪೊಲೀಸ್ ಕಾನ್ಸಟೇಬಲ್ ಆಗಿದ್ದು, ನಾಲ್ಕು ದಿನದ ರಜೆಯ ನಂತರ ಕಾರವಾರದ ಡಿ.ಎ.ಆರ್ ಕಚೇರಿಯಲ್ಲಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರದಲ್ಲಿ ನಡೆದಿದೆ. ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಪೊಲೀಸ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆ ಮಾಡಿಕೊಂಡ ಡಿ.ಆರ್.ಪೊಲೀಸ್ ಕಾನ್ಸಟೇಬಲ್ ಆಗಿದ್ದು, ಕಾರವಾರದ ಡಿ.ಎ.ಆರ್ ಕಚೇರಿಯಲ್ಲಿ ಇಂದು ಕರ್ತವ್ಯಕ್ಕೆ ಹಾಜರಾಗಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಳೆದ ನಾಲ್ಕು ದಿನದ ಹಿಂದೆ ರಜೆಯ ಮೇಲೆ ಹೊನ್ನಾವರ ತಾಲೂಕಿನ ಹಳದಿಪುರಕ್ಕೆ ತೆರಳಿದ್ದ ಇವರು ಇಂದು ಕಚೇರಿಗೆ ಆಗಮಿಸಿ ಕಚೇರಿಯ ಪೊಲೀಸ್ ನೌಕರರ ಸಹಕಾರಿ ಸಂಘದ ಕಚೇರಿಯಲ್ಲಿ ನೇಣಿಗೆ ಶರಣಾಗಿದ್ದಾರೆ.

RELATED ARTICLES  ಯಶಸ್ವಿಯಾಗಿ ಮುಕ್ತಾಯಗೊಂಡ ಯಕ್ಷಗಾನ ಕಾರ್ಯಕ್ರಮ.

ಗುರುಪ್ರಸಾದ್ ನಾಯ್ಕ ರವರು ಡಿ.ಎ.ಆರ್ ಪೊಲೀಸ್ ತರಬೇತಿ ಶಾಲೆಯಲ್ಲಿ ಶಿಕ್ಷಕರಾಗಿ ಸಹ ಕಾರ್ಯನಿರ್ವಹಿಸುತಿದ್ದ ಇವರು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಹೆಸರನ್ನು ಗಳಿಸಿದ್ದರು.
ಆತ್ಮಹತ್ಯೆಗೆ ಯಾವುದೇ ಕಾರಣ ಈವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ,ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ನ್ಯಾಯದ ಮೂಲಕ ಪರೇಶ್ ಆತ್ಮಕ್ಕೆ ಶಾಂತಿ ಸಿಗಲಿ: ನಾಗರಾಜ ನಾಯಕ ತೊರ್ಕೆ