ನ್ಯೂಸ್ ಡೆಸ್ಕ್ : ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಮಧುಲಿಕಾ ರಾವತ್ ಅವರು ಸೇರಿದಂತೆ ಹಲವು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

RELATED ARTICLES  ಗೋಕರ್ಣದ ತಾರಮಕ್ಕಿ ಕೇರಿಯಲ್ಲಿ ಗ್ರಾಮ ದೇವತೆ ಶ್ರೀ ಭದ್ರಕಾಳಿ ಪಲ್ಲಕ್ಕಿ ಉತ್ಸವ

ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

RELATED ARTICLES  ಟ್ಯಾಂಕರ್ ಬಡಿದು ಪಾದಾಚಾರಿ ಗಂಭೀರ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು(ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.