ಕುಮಟಾ : ತಾಲೂಕಿನ ಪಟ್ಟಣದ ವನ್ನಳ್ಳಿಯ ಹೆಡ್ ಬಂದರಿನಲ್ಲಿ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಕುಮಟಾ ತಾಲೂಕಿನ ಅಳ್ವೆಕೋಡಿಯ ವ್ಯಕ್ತಿ ಕೃಷ್ಣಾ ಕುಮಟಾ ಪಟ್ಟಣದ ವನ್ನಳ್ಳಿಯ ಹೆಡ್ ಬಂದರಿನ ಕಲ್ಲು ಬಂಡೆಯ ಮೇಲೆ ಕುಳಿತು ಮೀನುಹಿಡಿಯಲು ಗಾಳ ಹಾಕುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಅರಬ್ಬಿ ಸಮುದ್ರದಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪಿಎಸ್‌ಐ ರವಿ ಗುಡ್ಡಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ತೆರಳಲಿ ಪರಿಶೀಲನೆ ನಡೆಸಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.