ಬೆಂಗಳೂರು: ಮಳೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಶಾಕ್ ನೀಡಿದೆ ಹವಾಮಾನ ಇಲಾಖೆ. ಹೌದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಒಳಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಈ ಅವಧಿಯಲ್ಲಿ ಬಂಗಾಳಕೊಲ್ಲಿಯಿಂದ ಈಶಾನ್ಯ ಮಾರುತಗಳು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೇಲೆ ಬೀಸುವ ಸಾಧ್ಯತೆಯಿದೆ. ಸೋಮವಾರ ತಮಿಳುನಾಡಿನಲ್ಲಿ ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಈ ಅವಧಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೆ, ಈ ಅವಧಿಯಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.