ಕುಮಟಾ:ತಾಲೂಕಿನ ವಾಲಗಳ್ಳಿಯಲ್ಲಿ ನಡೆದ ಅಪಘಾತವೊಂದರಲ್ಲಿ ಮಹಿಳೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆಯೊಂದು ನಿನ್ನೆ ನಡೆದ ಬಗ್ಗೆ ವರದಿಯಾಗಿದೆ. ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು ಹೊಸಬಿ ಗೌಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಮಹಿಳೆ ಎಂದು ತಿಳಿದುಬಂದಿದೆ.

RELATED ARTICLES  ಪ್ರೋ.ಎಸ್.ಶಂಭು ಭಟ್ಟರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಹೊಸಬಿ ಗೌಡ, ಕುಮಟಾ ಕಡೆಯಿಂದ ಮನೆಗೆ ತೆರಳತ್ತಿದ್ದ ವೇಳೆ ಬೈಕ್ ಅತಿವೇಗದಿಂದ ಬಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅಪಘಾತದ ರಭಸಕ್ಕೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಭಾರತದ ನೂತನ ರಾಷ್ಟ್ರಪತಿಗಳಾಗಿ ದ್ರೌಪದಿ ಮುರ್ಮು