ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಬಿಜೆಪಿ, ಸಚಿವ ಕೆ.ಜೆ.ಜಾರ್ಜ್ ಅವರು ಸೆ.26ರ ಒಳಗೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಅಹೋರಾತ್ರಿ ಧರಣೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಇದೇ ವೇಳೆ, ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿದ್ದು ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸರಕಾರದ ವಿರುದ್ಧ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದೆ. ಇದಕ್ಕೂ ಮುನ್ನ ನೀರಾವರಿ ಯೋಜನೆಗಳು ಕುಂಠಿತಗೊಂಡಿರುವುದರ ವಿರುದ್ಧ ಸೆ.20 ರಂದು ಕೊಪ್ಪಳ ಹಾಗೂ ಅಕ್ಟೋಬರ್ 22 ರಂದು ಬೀಳಗಿಯಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶ, ಅ. 23 ರಂದು ವಿಜಯಪುರ ಜಿಲ್ಲೆಯಲ್ಲಿ ಏತ ನೀರಾವರಿ ಯೋಜನೆ ವಿಳಂಬ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.
ಅಕ್ಟೋಬರ್ 1 ಮತ್ತು 2 ರಂದು ವಿಸ್ತಾರಕ ಕಾರ್ಯಕರ್ತರ ಕಾರ್ಯಾಗಾರ ನಡೆಯಲಿದೆ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದಲೂ ಒಟ್ಟು 300 ಮಂದಿ ವಿಸ್ತಾರಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.