ಅಂಕೋಲಾ : ತಾಲೂಕಿನ ಅಡ್ಲೂರ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಖಾಸಗಿ ಬಸ್ಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ವರದಿಯಾಗಿದೆ. ಬೆಂಗಳೂರಿನಿಂದ ಅಂಕೋಲಾ ಕಡೆ ಬರುತ್ತಿದ್ದ ಸೀ ಬರ್ಡ್ ಟ್ರಾವೆಲ್ಸ್ ಗೆ ಸೇರಿದ ಖಾಸಗಿ ಬಸ್ಸಿಗೆ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಖಾಸಗಿ ಬಸ್ ಚಾಲಕ ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಬಸ್ ಕ್ಲೀನರ್ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಸವರಾಜ ಯಮುನಪ್ಪ ಬೆಳ್ಳಂಕಿ ಮತ್ತು ಲಾರಿ ಚಾಲಕ ಮಂಜುನಾಥ ಅದಾನಪ್ಪ ಚಾಕ್ರಿ ಎನ್ನುವವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.