ಹೊನ್ನಾವರ: ವಿದ್ಯಾರ್ಥಿಗಳು ಈಗಿನ ಟಿ.ವಿ ಹಾಗೂ ಸಾಮಾಜಿಕ ಜಾಲತಾಣದ ಸಂಸರ್ಗದಿಂದ ಅದಾವ ದಾರಿ ಹಿಡಿಯುತ್ತಿದ್ದಾರೋ ಅರ್ಥ ಆಗುತ್ತಿಲ್ಲ.ಅದರ ಜೊತೆಗೆ ಶಿಕ್ಷಕರೂ ಮಕ್ಕಳನ್ನು ಸರಿದಾರಿಗೆ ತರಲು ಪ್ರಯತ್ನಿಸುವುದೂ ಸಹಜ. ಆದರೆ ಇಲ್ಲಿನ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದಾನೆ. ಕೂಡಲೇ ವಿದ್ಯಾರ್ಥಿನಿಗೆ ಶಾಲೆಯ ಶಿಕ್ಷಕಿ ಈ ಘಟನೆ ವಿವರಿಸಿದ್ದಾಳೆ. ಲವ್ ಲೆಟರ್ ನೋಡಿ ಸಿಟ್ಟಾದ ಶಿಕ್ಷಕಿ, ವಿದ್ಯಾರ್ಥಿಯನ್ನು ಕರೆಯಿಸಿ ಕೋಪದಿಂದ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯ ಪತ್ರಿಕೆ ಸುದ್ದಿಮಾಡಿದ್ದು, ವಿಷಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿಯ ಹೊಡೆತಕ್ಕೆ ಬಾಲಕನ ಬೆನ್ನುಗಳಲ್ಲಿ ಬಾಸುಂಡೆ ಎದ್ದಿದೆ. ಬಾಲಕ ಮನೆಗೆ ತೆರಳಿದಾಗ ಷೋಷಕರು ನೋಡಿದ್ದು, ಬೆನ್ನು ಕೆಂಪಾಗಿತ್ತು. ತಕ್ಷಣ ಪೋಷಕರು ಶಿಕ್ಷಕಿಯನ್ನು ತರಾಟೆ ತೆಗೆದುಕೊಂಡಿದ್ದಾರೆ. ವಿಷಯದ ಕುರಿತು ಶಿಕ್ಷಕಿ ಪೋಷಕರಲ್ಲಿ ಕ್ಷಮೆ ಕೇಳಿದ್ದು, ಪ್ರಕರಣ ಇತ್ಯರ್ಥಗೊಂಡಿದೆ ಎನ್ನಲಾಗಿದೆ.