ಕಾರವಾರ: ಜೆಸಿಬಿ ಯಲ್ಲಿ ಸುಮಾರು 250 ಕೆಜಿಗೂ ಅಧಿಕ ಜಿಲೆಟಿನ್, ಸಾಗಾಟ ಮಾಡಲಾಗುತಿದ್ದು ಮಾಹಿತಿ ಪಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಯವರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಚತುಷ್ಪತ ರಸ್ತೆ ಕಾಮಗಾರಿಗಾಗಿ ಕಲ್ಲುಗಳನ್ನು ಸ್ಪೋಟ ಗೊಳಿಸಲು ಅಜಾಗರೂಕತೆಯಿಂದ ಸಾಗಿಸುತ್ತಿದ್ದ ಜಿಲೆಟಿನ್ ನನ್ನು ಕಾರವಾರ ತಾಲೂಕಿನ ಅರಗ ಗ್ರಾಮದಲ್ಲಿ ನಿನ್ನೆ ಸಂಜೆ ವಶಕ್ಕೆ ಪಡೆಯಲಾಗಿದೆ.
ಹೆದ್ದಾರಿ ಅಗಲೀಕರಣಕ್ಕಾಗಿ ಸ್ಪೋಟಿಸಲು ಯಾವುದೇ ಮುಂಜಾಗ್ರತೆ ಇಲ್ಲದೇ ಜೆಸಿಬಿಯಲ್ಲಿ ಸಾಗಿಸಲಾಗುತಿತ್ತು. ಯಾವುದೇ ಮುಂಜಾಗ್ರತೆ ತೆಗೆದುಕೊಳ್ಳದೇ ಪ್ರತ್ಯೇಕ ವಾಹನದಲ್ಲಿ ಸಾಗಾಟ ಮಾಡದೇ ಜೆಸಿಬಿಯಲ್ಲಿ ಸಾಗಾಟ ಮಾಡಿದ್ದು ಒಂದು ವೇಳೆ ಸ್ಪೋಟ ಗೊಂಡಿದ್ದರೆ ದೊಡ್ಡ ಅನಾಹುತ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆಯಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.