ನ್ಯೂಸ್ ಡೆಸ್ಕ್ : ಗಾಳಿಪಟ-2 ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕನ್ನು ಜೀ ಕನ್ನಡ ಮತ್ತು ಜೀ5 ಭಾರೀ ಮೊತ್ತಕ್ಕೆ ಖರೀದಿಸಿವೆ. ಗಣೇಶ್ ಮತ್ತು ದಿಗಂತ್ ನಟನೆಯ ರೊಮ್ಯಾಂಟಿಕ್ ಸಿನಿಮಾ ಗಾಳಿಪಟ-2 ಭಾರೀ ನಿರೀಕ್ಷೆ ಹುಟ್ಟು ಹಾಕಿದೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ 2008 ರಲ್ಲಿ ಈ ಮೂವರ  ಕಾಂಬಿನೇಷನ್ ನ ಗಾಳಿಪಟ ಸಿನಿಮಾ ಸೂಪರ್ ಹಿಟ್ ಆಗಿತ್ತು. ಆನಂದ್ ಆಡಿಯೊಗೆ ಮಾರಾಟವಾದ ಸಂಗೀತದ ಹಕ್ಕುಗಳು ಸೇರಿದಂತೆ ಚಿತ್ರವು 8 ಕೋಟಿ ರೂಪಾಯಿಗೂ ಹೆಚ್ಚು ಪ್ರೀ-ರಿಲೀಸ್ ವಹಿವಾಟು ಮಾಡಿದೆ ಎಂದು ಹೇಳಲಾಗುತ್ತದೆ. ಈ ವಿಷಯವನ್ನು ಗಾಳಿಪಟ-2 ನಿರ್ಮಾಪಕ ರಮೇಶ್ ರೆಡ್ಡಿ ಅವರೇ ಖಚಿತ ಪಡಿಸಿದ್ದಾರೆ.

RELATED ARTICLES  "ಗೋಕರ್ಣ ಗೌರವ" 403ನೇ ದಿನದ ಕಾರ್ಯಕ್ರಮದಲ್ಲಿ ಬಸವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು.

ಗಣೇಶ್ ಮತ್ತು ದಿಗಂತ್  ಜೊತೆಗೆ ಹಿರಿಯ ನಟ ಅನಂತ್ ನಾಗ್, ನಿರ್ದೇಶಕ-ನಟ ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್ ಮತ್ತು ಶರ್ಮಿಳಾ ಮಾಂಡ್ರೆ ಪ್ರಮುಖ ಪಾತ್ರಗಳಲ್ಲಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ, ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಗಾಳಿಪಟ 2 ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಅಧಿಕೃತ ದಿನಾಂಕ ಹೊರ ಬೀಳಲಿದೆ.

RELATED ARTICLES  ಹುಡುಗಿಯ ಜೊತೆಗೆ ಅನುಚಿತ ವರ್ತನೆ : ಯುವಕ ಪೊಲೀಸ್ ಬಲೆಗೆ