ದಾಂಡೇಲಿ: ಕಾಳಿ ನದಿಯಲ್ಲಿ ಮೊಸಳೆಯ ಕಾಟ ಜನ ಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ. ನಿನ್ನೆಯ ರಾತ್ರಿ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನನ್ನು ಮೊಸಳೆ ಹೊತ್ತೊಯ್ದ ಘಟನೆ  ನಡೆದಿದ್ದು ಸುದ್ದಿ ತಿಳಿದ ಉತ್ತರಕನ್ನಡ ಜನತೆ ಒಮ್ಮೆ ಶಾಕ್ ಆಗಿದ್ದು ಮಾತ್ರ ಸತ್ಯ.

RELATED ARTICLES  ಕುಮಟಾ ಕಾಂಕ್ರೀಟ್ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕರು.

ಮೊಸಳೆ ದಾಳಿಗೆ ಬಲಿಯಾದ ಯುವಕನನ್ನು ದಾಂಡೇಲಿಯ ಪಟೇಲ್ ನಗರದ ಆರ್ಷದ್ ಖಾನ್ ಎಂದು ಗುರ್ತಿಸಲಾಗಿದೆ. ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಹೋಗಿದ್ದ. ಈ ವೇಳೆ ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ಆತನನ್ನು ಎಳೆದೊಯ್ದಿದೆ ಎಂದು ವರದಿಯಾಗಿದೆ.

RELATED ARTICLES  ಕುಮಟಾ ಕಸಾಪದಿಂದ ದಿ.ಚಿಟ್ಟಾಣಿಯವರಿಗೆ ನುಡಿನಮನ ಕಾರ್ಯಕ್ರಮ

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಯುವಕನ ದೇಹಕ್ಕಾಗಿ ಹುಡುಕಾಟ ನಡೆಸುತಿದೆ.