ಬೆಂಗಳೂರು : ರಾಜ್ಯದಾದ್ಯಂತ ಶಾಲೆಗಳಲ್ಲಿ ಸಮವಸ್ತ್ರ ಹಾಗೂ ಹಿಜಾಬ್ ಕೇಸರಿ ಶಾಲು ವಿವಾದ ಜೋರಾಗಿದ್ದು, ಪ್ರಕರಣ ಕೋರ್ಟ ಮೆಟ್ಟಿಲೇರಿದೆ. ಆ ನಡುವೆ ರಾಜ್ಯಾದ್ಯಂತ ನಾಳೆಯಿಂದ ಮೂರು ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದು, ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿಯೂ ವಿಷಯ ಹಂಚಿಕೊಂಡಿದ್ದಾರೆ.

RELATED ARTICLES  BSNL ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಅನಂತ ಕುಮಾರ್ ಹೆಗಡೆ

ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬೊಮ್ಮಾಯಿ ಮನವಿ ಮಾಡಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ. ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

RELATED ARTICLES  ಫೇಸ್’ಬುಕ್ ಪ್ರೀತಿಗೆ ಗಂಡನಿಗೆ ಸುಪಾರಿ ನೀಡಿದ ಹೆಂಡತಿ!

ಮುಖ್ಯಮಂತ್ರಿಗಳ ಹೇಳಿಕೆ.

IMG 20220208 WA0001