ಹಿಜಾಬ್-ಕೇಸರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಫೆ.೧೬ರವರೆಗೂ ಪದವಿ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪದವಿ ಕಾಲೇಜುಗಳಿಗೆ ಫೆ.೧೬ರವರೆಗೂ ರಜೆಯನ್ನು ವಿಸ್ತರಣೆ ಮಾಡಲಾಗಿದ್ದು, ಇದು ಸರ್ಕಾರ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಿಗೆ ಅನ್ವಯಿಸುತ್ತವೆ. ಅಲ್ಲದೇ, ನಿಗದಿಯಾದ ಪರೀಕ್ಷೆಗಳು ಅದರಂತೆ ನಡೆಯಲಿವೆ ಎಂದಿದೆ. ಎಂದಿನಂತೆ ಆನ್’ಲೈನ್ ತರಗತಿಗಳು ಮುಂದುವರಿಯಲಿವೆ ಎಂದು ವರದಿಯಾಗಿದೆ.

ಶಾಲೆಗಳಿಗೆ ಹೆಚ್ಚುವರಿ ಭದ್ರತೆ ನೀಡಿ

RELATED ARTICLES  ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಶಿರಸಿಯಲ್ಲಿ ಬೃಹತ್ ಪ್ರತಿಭಟನೆ

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ. ಸೋಮವಾರ ಹೈಸ್ಕೂಲ್ ಬಳಿ ಕಟ್ಟೆಚ್ಚರ ವಹಿಸಿ. ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಸಂಘಟನೆಗಳ ಮೇಲೆ‌ ನಿಗಾ ಇಡಿ. ಇಲಾಖೆಗಳ‌ ನಡುವೆ ಸಮನ್ವಯತೆ ಇರಲಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು ಹಾಕಿದ್ದಾರೆ. ಬೀದರ್, ಬಾಗಲಕೋಟೆ, ಉಡುಪಿ, ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಹಿಜಾಬ್, ಕೇಸರಿ ಶಾಲು ವಿಚಾರದಲ್ಲಿ ಗಲಾಟೆಯಾಗಿದ್ದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಭದ್ರತೆ ನೀಡಲು ಸೂಚಿಸಲಾಗಿದೆ.

RELATED ARTICLES  ಮಹಿಳೆಯ ಜೊತೆ ಅನುಚಿತ ವರ್ತನೆ:‌ ಆರೋಪಿ ಅರೆಸ್ಟ್

ಪ್ರಚೋದನೆಗೆ ಒಳಗಾಗದಂತೆ ಕ್ರಮ

ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ಕೊಡಲಾಗಿದೆ. ಹೊರಗಿನ ಪ್ರಚೋದನೆಗೆ ಒಳಗಾಗದಂತೆ ಕ್ರಮಕೈಗೊಳ್ಳುವುದು. ಧಾರ್ಮಿಕ ಮುಖಂಡರ ಜತೆ ಶಾಂತಿ ಸಭೆ ನಡೆಸುವುದು. ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜುಗಳ ಆರಂಭಕ್ಕೆ ಒತ್ತು ನೀಡುತ್ತೇವೆ. ಪರಿಸ್ಥಿತಿ ಗಮನಿಸಿ ಒಂದೆರಡು ದಿನಗಳಲ್ಲಿ ನಿರ್ಧಾರ ತಿಳಿಸುತ್ತೇವೆ ಎಂದು ಸಿಎಂ ಜತೆ ಸಭೆ ನಂತರ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.