ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ಕಲಾ ತಪಸ್ವಿ ರಾಜೇಶ್ (84) ವಯೋಸಹಜ ಖಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ. ಉಸಿರಾಟ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯಕ್ಕೊಳಗಾಗಿದ್ದ ರಾಜೇಶ್ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಾಯಕ, ಪೋಷಕ ನಟನಾಗಿ ಮಿಂಚಿದ್ದ ರಾಜೇಶ್ ಇನ್ನೂ ಬಿಡುಗಡೆಯಾಗಬೇಕಿರುವ ಓಲ್ಡ್ ಮಾಂಕ್ ಸಿನಿಮಾದಲ್ಲಿ ಕೊನೆಯ ಬಾರಿಗೆ ಬಣ್ಣ ಹಚ್ಚಿದ್ದರು. ಅವರ ಕಲಾಸೇವೆಗೆ ಗೌರವ ಡಾಕ್ಟರೇಟ್ ಕೂಡಾ ಲಭಿಸಿತ್ತು. ಇದೀಗ ಮಕ್ಕಳು ಅಪಾರ ಬಂಧು-ಮಿತ್ರರನ್ನು ಅವರು ಅಗಲಿದ್ದಾರೆ.

ನಟ ರಾಜೇಶ್ ಬೆಂಗಳೂರಿನಲ್ಲೇ ಜನಿಸಿದವರು. ಇವರ ನಿಜನಾಮ ಮುನಿ ಚೌಡಪ್ಪ. ಚಿಕ್ಕವಯಸ್ಸಿನಲ್ಲೇ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಮುನಿ ಚೌಡಪ್ಪ ರಂಗಭೂಮಿ ಪ್ರವೇಶಿಸಿದರು. ತಂದೆ-ತಾಯಿಗೆ ಗೊತ್ತಿಲ್ಲದಂತೆ ‘ಸುದರ್ಶನ ನಾಟಕ ಮಂಡಳಿ’ ಸೇರಿದ ಮುನಿ ಚೌಡಪ್ಪ ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಹೆಸರಿನಿಂದ ಗುರುತಿಸಿಕೊಂಡರು.

RELATED ARTICLES  ಶ್ರೀಭಾರತೀ ವಿದ್ಯಾಲಯದಲ್ಲಿ ಉತ್ಸವದ ಮಾದರಿಯಲ್ಲಿ ಗಣರಾಜೊತ್ಸವ ದಿನಾಚರಣೆ

ಬಳಿಕ ತಮ್ಮದೇ ಆದ ‘ಶಕ್ತಿ ನಾಟಕ ಮಂಡಳಿ’ಯನ್ನ ವಿದ್ಯಾಸಾಗರ್ ರೂಪಿದರು. ‘ನಿರುದ್ಯೋಗಿ ಬಾಳು’, ‘ಬಡವನ ಬಾಳು’, ‘ವಿಷ ಸರ್ಪ’, ‘ನಂದಾ ದೀಪ’, ‘ಚಂದ್ರೋದಯ’, ‘ಕಿತ್ತೂರು ರಾಣಿ ಚೆನ್ನಮ್ಮ’ ಮುಂತಾದ ನಾಟಕಗಳ ಮೂಲಕ ವಿದ್ಯಾಸಾಗರ್ ಗಮನ ಸೆಳೆದರು.

ನಟನಾಗುವ ಇಚ್ಛೆ ಹೊಂದಿದ್ದ ರಾಜೇಶ್ ಅವರು ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕೆಲಸ ಆರಂಭಿಸಿದರು.

ರಂಗಭೂಮಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿದ್ಯಾಸಾಗರ್ ಅವರನ್ನು ‘ವೀರ ಸಂಕಲ್ಪ’ ಸಿನಿಮಾದ ಮೂಲಕ ಹುಣಸೂರು ಕೃಷ್ಣಮೂರ್ತಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

ಮ್ಮ ಕೆಲಸಕ್ಕೆ 15 ದಿನ ರಜೆ ಹಾಕಿ ಮದ್ರಾಸ್‌ಗೆ ತೆರಳಿದ ವಿದ್ಯಾಸಾಗರ್ ‘ವೀರ ಸಂಕಲ್ಪ’ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ವಿದ್ಯಾಸಾಗರ್‌ಗೆ ಅವಕಾಶಗಳು ಹುಡುಕಿಕೊಂಡು ಬರಲಾರಂಭಿಸಿದವು. ‘ಶ್ರೀ ರಾಮಾಂಜನೇಯ ಯುದ್ಧ’, ‘ಗಂಗೆ ಗೌರಿ’ ಚಿತ್ರಗಳಲ್ಲೂ ವಿದ್ಯಾಸಾಗರ್ ಅಭಿನಯಿಸಿದರು.

RELATED ARTICLES  ದಿನಾಂಕ 11/07/2019 ರ ದಿನ ಭವಿಷ್ಯ ಇಲ್ಲಿದೆ

1968ರಲ್ಲಿ ತೆರೆಕಂಡ ‘ನಮ್ಮ ಊರು’ ಚಿತ್ರದಲ್ಲಿ ತಮ್ಮ ಹೆಸರನ್ನು ವಿದ್ಯಾಸಾಗರ್‌ ಇಂದ ರಾಜೇಶ್‌ ಎಂದು ಬದಲಾಯಿಸಿಕೊಂಡರು. ನಟ ರಾಜೇಶ್ ಅವರ ವೃತ್ತಿ ಬದುಕಿಗೆ ದೊಡ್ಡ ತಿರುವು ಕೊಟ್ಟ ಚಿತ್ರ ‘ನಮ್ಮ ಊರು’. ಸಿ.ವಿ.ಶಿವಶಂಕರ್ ನಿರ್ದೇಶನದ ‘ನಮ್ಮ ಊರು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಚಿತ್ರದಲ್ಲಿ ನಟ ರಾಜೇಶ್ ಗಾಯಕರಾಗಿಯೂ ಜನಪ್ರಿಯತೆ ಪಡೆದರು.

‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ಮುಂತಾದ ಚಿತ್ರಗಳಲ್ಲಿ ರಾಜೇಶರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.