ಸಿದ್ದಾಪುರ: ತಾಲೂಕಿನ ಹೋಲಿ ರೋಝರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಶಿರಸಿ ಶೈಕ್ಷಣಿಕ ಜಿಲ್ಲೆಯ 9ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಯಲ್ಲಾಪುರದ
2021- 22ನೇ ಸಾಲಿನ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ತಾಲೂಕಿನ ಬೇಡ್ಕಣಿಯ ಜನತಾವಿದ್ಯಾಲಯ ಪ್ರೌಢಶಾಲೆ ವಿದ್ಯಾರ್ಥಿ ಶರಧಿ ಹೆಗಡೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾನೆ.
ಈತನಿಗೆ 3000 ರೂ. ನಗದು ಬಹುಮಾನ ನೀಡಲಾಗಿದ್ದು, ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವನ ಸಾಧನೆಗೆ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯೋಪಾಧ್ಯಾಯರಾದ ಪ್ರತಿಮಾ ಪಾಲೇಕರ್ ಈತನಿಗೆ ಮಾರ್ಗದರ್ಶನ ನೀಡಿದ್ದರು.