ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್​​) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್ಲೈನ್​(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ksrtc.in ಗೆ ಭೇಟಿ ನೀಡಿ.

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 7ನೇ ತರಗತಿ ಪಾಸಾಗಿರಬೇಕು.

RELATED ARTICLES  ಟೊಟೊ ಪುರಸ್ಕಾರ 2019 ಪ್ರವೇಶಕ್ಕೆ ಆಹ್ವಾನ




ವಯೋಮಿತಿ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಮಾರ್ಚ್​ 4, 2022ಕ್ಕೆ 18-40 ವರ್ಷದೊಳಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಆಫೀಸ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್) ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 11,320-15,010 ವೇತನ ನೀಡಲಾಗುತ್ತದೆ.

RELATED ARTICLES  'ಹಣತೆ’ ಬೆಳಕಿನಲ್ಲಿ ದೀಪಾವಳಿ ಕವಿಗೋಷ್ಠಿ ನ. 19 ಕ್ಕೆ.


ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ- 200 ರೂ. ಅರ್ಜಿ ಶುಲ್ಕ
ಅರ್ಜಿ ಶುಲ್ಕ ಪಾವತಿ ವಿಧಾನ: ಡಿಮ್ಯಾಂಡ್​ ಡ್ರಾಫ್ಟ್​(ಡಿಡಿ)​

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​​
ಭೌತಿಕ ಮಾನದಂಡಗಳು


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕಾತಿ)
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ಕೇಂದ್ರ ಕಚೇರಿ
ಬೆಂಗಳೂರು – 27


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/03/2022