ಬೆಂಗಳೂರು : ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರು ಕೋಲಾರದಿಂದ ಸ್ಪರ್ಧಿಸುವ ಕುರಿತು ಎಐಸಿಸಿಗೆ ವಿ.ಆರ್.ಸುದರ್ಶನ್ ಬರೆದ ಪತ್ರದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಸಿಎಂ ‘ನಾನು ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿ ನಿಂತರೂ ಗೆಲ್ಲುತ್ತೇನೆ. ನನ್ನ ಸ್ಪರ್ಧೆಯ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ’ ಎಂದರು.
ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು ‘ಕೇಂದ್ರವೇ ನಮ್ಮ ಫೋನ್ ಕದ್ದಾಲಿಸುತ್ತಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಇದೆಲ್ಲಾ ಚಿಲ್ಲರೆ ವ್ಯವಹಾರ’ ಎಂದರು.
ಯಡಿಯೂರಪ್ಪ ವಿರುದ್ಧ ಕಿಡಿ ಕಾರಿ ‘ಅವರು ಯಾವಾಗಲೂ ಸುಳ್ಳೇ ಹೇಳುವುದು. ಇನ್ನು ಚಾರ್ಜ್ ಶೀಟ್ ಎಲ್ಲಿಂದ ಬಿಡುಗಡೆ ಮಾಡುತ್ತಾರೆ’ ಎಂದು ಪ್ರಶ್ನಿಸಿದರು.