ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಕರ್ನಾಟಕ ಮೂಲಕ ವಿದ್ಯಾರ್ಥಿ ಸಾವನ್ನಪ್ಪಿರುವ ವಿಚಾರ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮೃತಪಟ್ಟಿದ್ದಾರೆ ಎಂದು ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ತಿಳಿಸಿದ್ದಾಗಿ ಸುದ್ದಿ ವಾಹಿನಿಯೊಂದು ವರದಿಮಾಡಿದೆ.
ಕಾರ್ಕಿವ್‍ನಲ್ಲಿ ನಾಲ್ಕನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರು ಅಗತ್ಯ ವಸ್ತುಗಳನ್ನು ತರಲು ಹೊರಗೆ ಹೋಗಿದ್ದರು. ತರಕಾರಿಗಾಗಿ ಲೈನಿನಲ್ಲಿ ನಿಂತಿದ್ದ ವೇಳೆ ಉಕ್ರೇನ್-ರಷ್ಯಾ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದೇ ಸಮಯದಲ್ಲಿ ಗುಂಡು ತಗುಲಿ ನವೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಒಬ್ಬರು ಬನವಾಸಿಯಿಂದ, ಮತ್ತಿಬ್ಬರು ಮುಂಡಗೋಡಿನವರು’ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾಹಿತಿ ಹಂಚಿಕೊಂಡಿದ್ದಾರೆ. ಬನವಾಸಿ ವಿದ್ಯಾರ್ಥಿಯೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. ಆತ ವಿನಿಟ್ಟಿಯಾದಿಂದ ಬಸ್ ಮೂಲಕ ರೊಮೇನಿಯಾಗಡಿಯನ್ನು ತಲುಪಿದ್ದಾನೆ. ರಾತ್ರಿ 9ರ ಹೊತ್ತಿಗೆ ಮುಂಡಗೋಡದ ಇಬ್ಬರೊಂದಿಗೆ ಮಾತನಾಡಿದ್ದು ,ಓರ್ವರು ಖಾರ್ಕಿವ್ ಭೂಗತ ಮೆಟ್ರೋ ನಿಲ್ದಾಣದಲ್ಲಿ, ಮತ್ತೋರ್ವ ಕಾಲೇಜು ಹಾಸ್ಟೆಲ್ ಬಂಕರ್‌ಗಳಲ್ಲಿದ್ದಾರೆ. ನಾವು ಅವರ ಸುರಕ್ಷತೆಯ ಬಗ್ಗೆ ವಿದೇಶಾಂಗವ್ಯವಹಾರಗಳ ಸಚಿವಾಲಯದಿಂದ ನಿರಂತರ ಮಾಹಿತಿಪಡೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.