ಕುಮಟಾ: ತಾಲೂಕಿನ ಮೂರೂರಿನ ಅಂಗಡಿಕೇರಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಕೋಳಿ ಅಂಗಡಿಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದ ಮೂರೂರು ಸಮೀಪದ ಕರ್ಕಿಮಕ್ಕಿನಿವಾಸಿ ಈಶ್ವರಯಂಕು ಗೌಡ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

RELATED ARTICLES  ಗ್ರಾಮೀಣ ರಸ್ತೆಗೆ ಸರಕಾರ ಆದ್ಯತೆ ನೀಡಲಿ: ಶಾಸಕ ಕಾಗೇರಿ

ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೋದವನು ಸಂಜೆಯಾದರೂ ಮನೆಗೆ ಬಂದಿರಲಿಲ್ಲ ಎಂದು ಆತಂಕಗೊoಡ ಕುಟುಂಬದವರು ವಿಚಾರಿಸಿದ್ದು, ಈ ವೇಳೆ ಹೊಳೆಯಲ್ಲಿ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

RELATED ARTICLES  ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದ ಮಾಸೂರು ಬೀಟ್ ಪೋಲೀಸ್ ದಯಾನಂದ ನಾಯ್ಕ.

ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಪೂರ್ಣ ತನಿಖೆ ನಂತರ ಹೆಚ್ಚಿನ ವಿವರ ತಿಳಿದು ಬರಬೇಕಿದೆ.