ಶಿರಸಿ: ತಾಲೂಕಿನ ಭೈರುಂಬೆ ಸಮೀಪದ ದೇವರಕೆರಿಯಲ್ಲಿ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿ ಪಿ.ಯು.ಸಿ. ಓದುತ್ತಿದ್ದಳು ಎಂದು ತಿಳಿದುಬಂದಿದ್ದು, ಮನೆಯವರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೂಜಾ ನಾಗರಾಜ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

RELATED ARTICLES  ವೀರ ಯೋಧ ಕುಮಟಾದ ಅಶೋಕ ಹೆಗಡೆಯವರಿಗೆ ಅಂತಿಮ ನಮನ ಸಲ್ಲಿಸಿದ ಸಾರ್ವಜನಿಕರು.

ಇತ್ತಿಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದೆ. ಅದರಲ್ಲೂ ವಿದ್ಯಾರ್ಥಿಗಳು ಸಣ್ಣಸಣ್ಣ ವಿಷಯವನ್ನೇ ಮನಸ್ಸಿಗೆ ಹಚ್ಚಿಕೊಂಡು ಸಾವಿಗೆ ಶರಣಾಗುತ್ತಿರುವುದು ಬೇಸರದ ಸಂಗತಿ. ಪ್ರಕರಣದ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಮೂಡ್ಕಣಿ ಗಣೇಶೋತ್ಸವ ಇತರರಿಗೆ ಮಾದರಿಯಾಗಿದೆ: ಶಾಸಕ ಸುನೀಲ್ ನಾಯ್ಕ