ಕಾರವಾರ: ರಷ್ಯಾ ಹಾಗೂ ಉಕ್ರೇನ್ ಯುದ್ಧದ ಭೀತಿಯಿಂದ ಭಾರತೀಯರನ್ನು ಪಾರುಮಾಡುವ ಕಾರ್ಯ ನಡೆಯುತ್ತಿದ್ದು, ಇಂದು 15ಕ್ಕೂ ಅಧಿಕ ಮಂದಿ ಕನ್ನಡಿಗರು ದೆಹಲಿಗೆ ಆಗಮಿಸಿದ್ದು ದೆಹಲಿಯಿಂದ ಬೆಂಗಳೂರಿಗೆ ತೆರಳಿ ಭಾನುವಾರ ಊರಿಗೆ ಮರಳಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದ್ದು ಇದರಲ್ಲಿ ಉತ್ತರಕನ್ನಡಿಗರೂ ಸಮಾಧಾನ ಪಡುವ ಸುದ್ದಿಯೊಂದಿದೆ. ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸ್ನೇಹಾ ಹೊಸಮುನಿ ಇಂದು ದೆಹಲಿಯ ಅಂತರಾಷ್ಟೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು ದೆಹಲಿ ಕರ್ನಾಟಕ ಭವಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಸ್ನೇಹಾ ರವರು ಉಕ್ರೆನ್ ನ ಖಾರ್ಕಿವ್ ನಲ್ಲಿ ನಾಲ್ಲನೇ ವರ್ಷದ ವೈದ್ಯಕೀಯ ಶಿಕ್ಷಣ ಪಡೆಯುತಿದ್ದು ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿಕೊಂಡಿದ್ದರು. ಕೇಂದ್ರ ಗೃಹ ಇಲಾಖೆ ಹಾಗೂ ಉಕ್ರೇನ್ ಭಾರತೀಯ ರಾಯಭಾರಿ ಕಚೇರಿ ಸೂಚನೆಯಂತೆ ರುಮೇನಿಯಾಕ್ಕೆ ತನ್ನ ಸ್ನೇಹಿತರೊಂದಿಗೆ ಪ್ರಯಾಣ ಬೆಳಸಿದ್ದರು. ರುಮೇನಿಯಾ ಗಡಿಯಿಂದ ಭಾರತಕ್ಕೆ ಮರಳಿರುವ ಅವರು ಭಾನುವಾರ ಮನೆಗೆ ತೆರಳಲಿದ್ದಾರೆ.