ಕಾರವಾರ : ಅನೇಕಾನೇಕ ಗೊಂದಲಕ್ಕೆ ಕಾರಣವಾಗಿರುವ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ನಾಳೆ ಹೈಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬರಲಿದ್ದು, ತೀರ್ಪು ಹೊರಬೀಳುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೆಯಾಧ್ಯಾಂತ 144 ಸೆಕ್ಷನ್ ಜಾರಿಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳ ಮುಂದೆ ನಾಳೆ ಪೊಲೀಸ್ ನಿಯೋಜನೆ ಮಾಡಲಾಗುತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

RELATED ARTICLES  ಬೆಳಕೊಂಡ ಶಾಲೆಗೆ ಶಾಸಕ ದಿನಕರ ಶೆಟ್ಟಿ ಭೇಟಿ: ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಸಮಸ್ಯೆ ಬಗೆಹರಿಸಲು ಸೂಚನೆ

ಸೂಕ್ಷ್ಮ ಪ್ರದೇಶಗಳಲ್ಲಿ ಪ್ರತಿ ಶಾಲಾ ಕಾಲೇಜುಗಳ ಮುಂದೆ ಪೋಲಿಸ್ ಬೀಟ್ ಗಳು ಇರಲಿದ್ದು, ಬನವಾಸಿ, ಹೊನ್ನಾವರ, ಭಟ್ಕಳ ತಾಲೂಕಿನ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಎಂದು ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಸುಮನ್ ಪೆನ್ನೆಕರ್ ಮಾಹಿತಿ ನೀಡಿದ್ದಾರೆ.

RELATED ARTICLES  ಕೊಂಕಣದಲ್ಲಿ ‘ಸರಸ್ವತಿ ಸಂಭ್ರಮ’