ಭಟ್ಕಳ: ಹಿಜಾಬ್ ವಿವಾದದ ಬಗ್ಗೆ ತೀರ್ಪು ಹೊರಬಿದ್ದಿದ್ದು, ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿದೆ. ವಿದ್ಯಾರ್ಥಿನಿ ನಿಭಾ ನಾಜ್ ಪರವಾಗಿ ವಕೀಲ ಅನಾಸ್ ತನ್ವೀರ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿತ್ತು. ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ದೀಕ್ಷಿತ್ ಮತ್ತು ಜೆ.ಎಂ ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದರು ತೀರ್ಪು ವಿರೋಧಿಸಿ, ಭಟ್ಕಳದಲ್ಲಿ ನಾಳೆ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ತಂಜೀಮ್ ಸಂಘಟನೆ ಕರೆ ನೀಡಿದೆ. ಹೈಕೋರ್ಟ್ ತೀರ್ಪಿನಿಂದ ತಜೀಂ ಅಸಮಾಧಾನಗೊಂಡಿದೆ ಎನ್ನಲಾಗಿದೆ.
ಹಿಜಾಬ್ ವಿರುದ್ಧ ಹೈಕೋರ್ಟ್ ನಲ್ಲಿ ತೀರ್ಪು ಬಂದ ಹಿನ್ನಲೆ ಇಂದು ಭಟ್ಕಳದಲ್ಲಿ ಮುಸ್ಲಿಂ ವರ್ತಕರಿಂದ ಸ್ವಯಂಪ್ರೇರಿತ ಅಂಗಡಿ ಮುಂಗಟ್ಟು ಬಂದ್ ಮಾಡಿ
ಅಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಪ್ರಮುಖ ರಸ್ತೆಯಲ್ಲಿರುವ ಮುಸ್ಲಿಮ್ ವರ್ತಕರ ಅಂಗಡಿ ಮುಂಗಟ್ಟುಗಳು ಬಂದಾಗಿದ್ದ ದೃಶ್ಯಕಂಡು ಬಂತು. ಆದರೇ ಕೆಲವರು ಅಂಗಡಿ ಮುಂಗಟ್ಟನ್ನು ಬಂದ್ ಮಾಡದೇ ತೆರದಿದ್ದರಿಂದ ಕೆಲವು ಮುಖಂಡರು ಬಲವಂತವಾಗಿ ಬಂದ್ ಮಾಡಿಸಿದರು. ಹೀಗಾಗಿ ಭಟ್ಕಳ ನಗರದ ಡಿವೈ ಎಸ್.ಪಿ ಬೆಳ್ಳಿಯಪ್ಪ ನವರು ಸ್ಥಳಕ್ಕೆ ಆಗಮಿಸಿ ಬಲವಂತವಾಗಿ ಬಂದ್ ಮಾಡಿಸದಂತೆ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮುಸ್ಲಿಂ ಮುಖಂಡರು ಹಾಗೂ ಪೊಲೀಸರ ನಡುವೆ ಕೆಲವು ಸಮಯ ಮಾತಿನ ಚಕಮಕಿ ನಡೆಯಿತು.