ಹೊನ್ನಾವರ: ಗೇರುಮರಕ್ಕೆ ನೇಣು ಬಿಗಿದಕೊಂಡು ಕೊಳೆತ ರೀತಿಯಲ್ಲಿ ವ್ಯಕ್ತಿಯೊಬ್ಬನ ಶವ ತಾಲೂಕಿನ ಕವಲಗೇರಿಯ ಗೇರು ತೋಪಿನಲ್ಲಿ ಪತ್ತೆಯಾಗಿದೆ. ವ್ಯಕ್ತಿಯ ದೇಹ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಕಳೆದ ಐದಾರು ದಿನಗಳ ಹಿಂದೆಯೆ ವ್ಯಕ್ತಿ ಸಾವನ್ನಪ್ಪಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶವವು ಕೊಳೆತು ನಾರುತ್ತಿದ್ದು, ವ್ಯಕ್ತಿಯ ಪತ್ತೆಗೆ ತನಿಖೆ ಆರಂಭವಾಗಿದೆ. ಘಟನೆಯ ಬಗ್ಗೆ ತಿಳಿದ ಸ್ಥಳೀಯರಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಸ್ಥಳೀಯರು ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದರೂ ತನಿಖೆಯಿಂದ ನಿಖರ ಮಾಹಿತಿ ದೊರೆಯಲಿದೆ.